Select Your Language

Notifications

webdunia
webdunia
webdunia
webdunia

ಇಂದು ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ

ಇಂದು ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಚಾಲನೆ ನೀಡಲಿರುವ ಪ್ರಧಾನಿ ಮೋದಿ
ನವದೆಹಲಿ , ಭಾನುವಾರ, 24 ಫೆಬ್ರವರಿ 2019 (09:56 IST)
ನವದೆಹಲಿ : ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ಘೋಷಿಸಲಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು  ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಚಾಲನೆ ನೀಡಲಿದ್ದಾರೆ.


ಫೆ 1 ರಂದು ಮಂಡನೆಯಾದ ಮಧ್ಯಂತರ ಬಜೆಟ್ ನಲ್ಲಿ 5 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ಪ್ರತಿ ರೈತರಿಗೆ ವಾರ್ಷಿಕ 6000 ರೂ. ನೀಡಲಾಗುವುದು. ಪ್ರತಿ 4 ತಿಂಗಳಿಗೊಮ್ಮೆ 2000 ರೂ. ರೈತರ ಖಾತೆಗೆ ನೇರವಾಗಿ ಜಮಾ ಮಾಡಲಾಗುವುದು. 3 ಕಂತುಗಳಲ್ಲಿ ಹಣ ನೀಡುವುದಾಗಿ ಘೋಷಣೆಯಾಗಿತ್ತು.


ಅದರಂತೆ ಕಿಸಾನ್ ಸಮ್ಮಾನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 1 ಗಂಟೆಗೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ತವರು ಗೋರಕಪುರ್ ನಲ್ಲಿ ಚಾಲನೆ ನೀಡಲಿದ್ದಾರೆ. ಬಿಜೆಪಿ ರೈತಾ ಮೋರ್ಚಾ ಹಮ್ಮಿಕೊಂಡಿರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ ರೈತರಿಗೆ ಎರಡು ಸಾವಿರ ರೂಪಾಯಿ ಚೆಕ್ ನೀಡುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದು, ನಾಳೆ ಅಂಬಾನಿ ಪುತ್ರನ ಪ್ರಿವೆಡ್ಡಿಂಗ್ ಕಾರ್ಯಕ್ರಮ: ಕುಬೇರ ಪುತ್ರನ ಪಾರ್ಟಿ ಖರ್ಚು ಎಷ್ಟು ಗೊತ್ತಾ?!