ಪ್ರಧಾನಿ ವಿರುದ್ಧ ಮುಖ್ಯಮಂತ್ರಿಗಳ ತೀವ್ರ ವಾಗ್ದಾಳಿ !

Webdunia
ಗುರುವಾರ, 28 ಏಪ್ರಿಲ್ 2022 (14:55 IST)
ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಗೆ ಇಂಧನಗಳ ಮೇಲಿನ ತೆರಿಗೆ ಕಡಿತಗೊಳಿಸುವಂತೆ ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮುಖ್ಯಮಂತ್ರಿಗಳು ತೀವ್ರ ವಾಗ್ದಾಳಿ ನಡೆಸಿದ್ದಾರೆ.
 
ಪ್ರಧಾನಿ ಮೋದಿ ಅವರನ್ನು ತರಾಟೆಗೆ ತೆಗೆದುಕೊಂಡಿರುವ ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್, ಪ್ರಧಾನಿಗೆ ನಾಚಿಕೆಯಾಗಬೇಕು ಎಂದು ಕಟು ಶಬ್ದವನ್ನು ಪ್ರಯೋಗಿಸಿದ್ದಾರೆ. ಅಲ್ಲದೇ ತನ್ನ ರಾಜ್ಯದಲ್ಲಿ 2015 ರಿಂದ ಇಂಧನ ತೆರಿಗೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ರಾಜ್ಯಗಳನ್ನು ಕೇಳುವ ಬದಲು ಕೇಂದ್ರವು ತೆರಿಗೆಯನ್ನು ಏಕೆ ಕಡಿತಗೊಳಿಸಬಾರದು? ಕೇಂದ್ರವು ಕೇವಲ ತೆರಿಗೆಯನ್ನಷ್ಟೇ ಹೆಚ್ಚಿಸಿಲ್ಲ, ಸೆಸ್ ಕೂಡ ಸಂಗ್ರಹಿಸುತ್ತದೆ. ನಿಮಗೆ ಧೈರ್ಯವಿದ್ದರೆ, ಮೌಲ್ಯವರ್ಧಿತ ತೆರಿಗೆಗಳ ಬಗ್ಗೆ ವಿವರ ನೀಡಿ ಎಂದು ಸವಾಲು ಹಾಕಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತನಾಡಿ, ಪ್ರಧಾನಿ ಮೋದಿಯವರು ಸಂಪೂರ್ಣ ಏಕಪಕ್ಷೀಯ ಮತ್ತು ದಾರಿತಪ್ಪಿಸುವ ಭಾಷಣ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ಸಂಗತಿಗಳು ತಪ್ಪು.

ಕಳೆದ ಮೂರು ವರ್ಷಗಳಿಂದ ಪ್ರತಿ ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ 1 ರೂಪಾಯಿ ಸಬ್ಸಿಡಿ ನೀಡುತ್ತಿದ್ದೇವೆ. ಇದಕ್ಕಾಗಿ 1,500 ಕೋಟಿ ರೂ. ಖರ್ಚು ಮಾಡಿದ್ದೇವೆ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. 

ಕೇಂದ್ರಕ್ಕೆ 97,000 ಕೋಟಿ ರೂ. ಬಾಕಿ ಇದೆ. ಅರ್ಧದಷ್ಟು ಮೊತ್ತ ಪಡೆದ ಮರುದಿನ 3,000 ಕೋಟಿ ರೂ., ಪೆಟ್ರೋಲ್ ಮತ್ತು ಡೀಸೆಲ್ ಸಬ್ಸಿಡಿ ನೀಡುತ್ತೇವೆ. ಸಬ್ಸಿಡಿಯಲ್ಲಿ ನನಗೆ ಯಾವುದೇ ಸಮಸ್ಯೆ ಇಲ್ಲ. ಆದರೆ ನಾನು ನನ್ನ ಸರ್ಕಾರವನ್ನು ಹೇಗೆ ನಡೆಸುವುದು ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಬ್ರ್ಯಾಂಡ್‌ ಹೆಸರಿನಲ್ಲಿ ನಕಲಿ ತುಪ್ಪ‌ ಮಾರಾಟ ಜಾಲದ ಕಿಂಗ್‌ ಪಿನ್‌ ದಂಪತಿ ಸಿಸಿಬಿ ಬಲೆಗೆ

ಪಾಕ್‌ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಾವು ವದಂತಿ: ಅಡಿಯಾಲಾ ಜೈಲಿನ ಮುಂದೆ ಹೈಡ್ರಾಮಾ

ಈ ವಿಚಾರಕ್ಕೆ ರಾಹುಲ್, ಸೋನಿಯಾ ಭೇಟಿಯಾಗಬೇಕೆಂದ ಮಲ್ಲಿಕಾರ್ಜುನ ಖರ್ಗೆ

ದೆಹಲಿ ಸ್ಪೋಟ, ಇಂದು ಬಂಧಿಯಾಗಿರುವ ಆರೋಪಿಯ ಕೈವಾಡ ಕೇಳಿದ್ರೆ ಶಾಕ್ ಆಗುತ್ತೆ

ಪೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ಬಿಗ್‌ ರಿಲೀಫ್‌, ತೀರ್ಪು ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ
Show comments