ಇಂದು ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ ಮೂಲಕ ವಿದ್ಯಾರ್ಥಿಗಳ ಜೊತೆ ಪ್ರಧಾನಿ ಚರ್ಚೆ

ಸೋಮವಾರ, 20 ಜನವರಿ 2020 (10:34 IST)
ನವದೆಹಲಿ : ಇಂದು ನಡೆಯುವ ‘ಪರೀಕ್ಷಾ ಪೇ ಚರ್ಚಾ’ ಕಾರ್ಯಕ್ರಮದ ಮೂರನೇ ಅವತರಣಿಕೆಯಲ್ಲಿ ಪ್ರಧಾನಿ ಮೋದಿಯವರು ವಿದ್ಯಾರ್ಥಿಗಳೊಂದಿಗೆ ಚರ್ಚೆ ನಡೆಸಲಿದ್ದಾರೆ.ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಆಯೋಜಿಸಿರುವ ಈ ಕಾರ್ಯಕ್ರಮ ಇಂದು ಬೆಳಿಗ್ಗೆ 11 ಗಂಟೆಗೆ ಪ್ರಾರಂಭವಾಗಲಿದ್ದು, ಈ ಕಾರ್ಯಕ್ರಮದಲ್ಲಿ ದೇಶದ್ಯಂತ ವಿವಿಧ ಶಾಲೆಗಳಿಂದ ಆಯ್ದ  ಸುಮಾರು 2 ಸಾವಿರದಷ್ಟು ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಅಲ್ಲದೇ ಅದರಲ್ಲಿ ಕರ್ನಾಟಕದಿಂದ 42 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಒತ್ತಡಗಳನ್ನು ನಿಭಾಯಿಸುವ ಬಗ್ಗೆ ಪ್ರಧಾನಿ ಮೋದಿ ತಮ್ಮ ಅನುಭವಯುಕ್ತ ಸಲಹೆಗಳನ್ನ ನೀಡಲಿದ್ದಾರೆ. ಹಾಗೇ ಅನೇಕ ಶಾಲೆಗಳಲ್ಲಿ  ಈ ಕಾರ್ಯಕ್ರಮದ ನೇರ ವೀಕ್ಷಣೆಯ ವ್ಯವಸ್ಥೆಯನ್ನು ಕಲ್ಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಬಿಗ್ ಬಾಸ್: ಚಂದನ್ ಆಚಾರ್ ಗೆ ಹೀಗೆ ಮಾಡಿದ್ದು ಸರೀನಾ?