Select Your Language

Notifications

webdunia
webdunia
webdunia
webdunia

ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ : ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ

ವಿದ್ಯಾರ್ಥಿನಿಯರ ಖಾಸಗಿ ವೀಡಿಯೋ ಲೀಕ್ : ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ
ಚಂಡೀಗಢ , ಭಾನುವಾರ, 18 ಸೆಪ್ಟಂಬರ್ 2022 (13:26 IST)
ಚಂಡೀಗಢ : ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿಯೊಬ್ಬಳು ಇತರ ವಿದ್ಯಾರ್ಥಿನಿಯರ ಖಾಸಗಿ ವೀಡಿಯೋಗಳನ್ನು ಸೋರಿಕೆ ಮಾಡಿದ್ದು, ಇದರ ಹಿನ್ನೆಲೆ ವಿಶ್ವವಿದ್ಯಾಲಯದಲ್ಲಿ ಭಾರೀ ಪ್ರತಿಭಟನೆ ಭುಗಿಲೆದ್ದಿದೆ.
 
ಸುಮಾರು 60 ವಿದ್ಯಾರ್ಥಿನಿಯರು ಸ್ನಾನ ಮಾಡುತ್ತಿರುವ ವೀಡಿಯೋವನ್ನು ವಿದ್ಯಾರ್ಥಿನಿಯೊಬ್ಬಳು ಸೆರೆಹಿಡಿದು, ಅದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವುದಾಗಿ ಆರೋಪಿಸಲಾಗಿದೆ.

ಈ ವೀಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗುತ್ತಿದ್ದು, ವೀಡಿಯೋವನ್ನು ಹರಿಬಿಟ್ಟ ವಿದ್ಯಾರ್ಥಿನಿಯನ್ನು ಪೊಲೀಸರು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಈ ಘಟನೆಯಿಂದಾಗಿ ನೊಂದ ಹಲವು ವಿದ್ಯಾರ್ಥಿನಿಯರು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎಂದು ವದಂತಿಗಳು ಹಬ್ಬುತ್ತಿವೆ. ಆದರೆ ಈ ವದಂತಿಯನ್ನು ನಿರಾಕರಿಸಿದ ವಿಶ್ವವಿದ್ಯಾಲಯದ ಅಧಿಕಾರಿಗಳು, ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿನಿಯೊಬ್ಬಳು ಪ್ರಜ್ಞೆ ತಪ್ಪಿ ಬಿದ್ದಿದ್ದು, ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ. 

 

Share this Story:

Follow Webdunia kannada

ಮುಂದಿನ ಸುದ್ದಿ

ಎಸ್‍ಟಿ ಮೀಸಲಾತಿಯನ್ನು ಹೆಚ್ಚಿಸುತ್ತೇವೆ : ಕೆಸಿಆರ್