ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಪುತ್ರಿ ಪ್ರಿಯಾಂಕಾ ಗಾಂಧಿ ರಾಜಕೀಯ ಪ್ರವೇಶಿಸುತ್ತಾರೆ ಎನ್ನುವ ವರದಿಗಳ ಮಧ್ಯೆ, ಒಬ್ಬರಿಂದ ಪಕ್ಷಕ್ಕೆ ಪುನಶ್ಚೇತನ ನೀಡಲು ಸಾಧ್ಯವಿಲ್ಲ. ಒಗ್ಗಟ್ಟನಿಂದ ಪಕ್ಷಕ್ಕೆ ಪುನಶ್ಚೇತನ ನೀಡಬಹುದು ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಹೇಳಿದ್ದಾರೆ.
ಮುಂಬರುವ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಪ್ರಚಾರ ನಡೆಸಲಿದ್ದಾರೆಯೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷಕ್ಕೆ ಚೇತರಿಕೆ ನೀಡಲು ಒಬ್ಬರಿಂದ ಸಾಧ್ಯವಿಲ್ಲ. ಒಗ್ಗಟ್ಟಿನಿಂದ ಹೋರಾಡಿದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ನೀಡಬಹುದಾಗಿದೆ ಎನ್ನುವುದು ನನ್ನ ವ್ಯಯಕ್ತಿಕ ಅಭಿಪ್ರಾಯವಾಗಿದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷಕ್ಕೆ ಪುನಶ್ಚೇತನ ನೀಡಲು ಪ್ರಿಯಾಂಕಾ ಗಾಂಧಿ ಬಳಿ ಮಂತ್ರದಂಡವಿಲ್ಲ. ಕಾಂಗ್ರೆಸ್ ನಾಯಕರು ಒಗ್ಗಟ್ಟಿನಿಂದ ಮುಂದೆ ಬಂದು ಪಕ್ಷಕ್ಕೆ ಪ್ರಾಮಾಣಿಕವಾಗಿ ದುಡಿದಲ್ಲಿ ಚೇತರಿಕೆ ಕಾಣಬಹುದಾಗಿದೆ. ಒಬ್ಬರಿಂದಲೇ ಪಕ್ಷ ಚೇತರಿಕೆ ಕಾಣುವ ಯು ಅಂತ್ಯವಾಗಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿುವುದು ವಿಳಂಬವಾಗುತ್ತಿದೆಯಲ್ಲಾ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಸೂಕ್ತ ಸಮಯ ಬಂದಾಗ ರಾಹುಲ್ ಅಧ್ಯಕ್ಷ ಸ್ಥಾನ ಅಲಂಕರಿಸುತ್ತಾರೆ. ಇದರಲ್ಲಿ ಅನುಮಾನ ಬೇಡ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ತಿಳಿಸಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.