Publish Date: Sat, 29 Apr 2023 (14:24 IST)
Updated Date: Sat, 29 Apr 2023 (14:12 IST)
ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ದೆಹಲಿಯ ಜಂತರ್ ಮಂತರ್ನಲ್ಲಿ ಧರಣಿ ನಡೆಸುತ್ತಿದ್ದ ಮಹಿಳಾ ಕುಸ್ತಿಪಟುಗಳನ್ನು ಶನಿವಾರ ಮುಂಜಾನೆ ಭೇಟಿಯಾಗಿದ್ದು, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.
ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಪ್ರತಿಭಟನೆ ನಡೆಯುತ್ತಿದೆ.
ಪ್ರತಿಭಟನೆಯ ನೇತೃತ್ವ ವಹಿಸಿರುವ ಮಹಿಳಾ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಅವರನ್ನು ಪ್ರಿಯಾಂಕಾ ಭೇಟಿಯಾಗಿದ್ದಾರೆ.