Publish Date: Fri, 16 Oct 2020 (23:16 IST)
Updated Date: Fri, 16 Oct 2020 (23:19 IST)
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ, ಕೊಲೆ ಕೇಸ್ ಗಳ ವಿರುದ್ಧ ಕಾಂಗ್ರೆಸ್ ನಾಯಕಿ ಕಿಡಿಕಾರಿದ್ದಾರೆ.
ಕಳೆದ ಒಂದು ವಾರದಲ್ಲಿ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಹಾಗೂ ಕೊಲೆ ಸೇರಿದಂತೆ 13 ಕೇಸ್ ಗಳು ದಾಖಲಾಗಿವೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ತಿಳಿಸಿದ್ದಾರೆ.
ನಾಲ್ಕು ಕೇಸ್ ಗಳು ಕೊಲೆ, ಆತ್ಮಹತ್ಯೆಗೆ ಸಂಬಂಧಿಸಿದ್ದಾಗಿರುವುದಕ್ಕೆ ಕಳವಳ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶ ಸರಕಾರ ಮಹಿಳೆಯರಿಗೆ ರಕ್ಷಣೆ ಒದಗಿಸಲು ವಿಫಲವಾಗಿದೆ ಎಂದು ಪ್ರಿಯಾಂಕಾ ಗಾಂಧಿ ಟೀಕೆ ಮಾಡಿದ್ದಾರೆ.