Select Your Language

Notifications

webdunia
webdunia
webdunia
webdunia

ಲಾಲ್ ಬಹದ್ದೂರ್ ಶಾಸ್ತ್ರಿಗೆ ಅವಮಾನ ಮಾಡಿದ ಪ್ರಿಯಾಂಕ ಗಾಂಧಿ

ಲಾಲ್ ಬಹದ್ದೂರ್ ಶಾಸ್ತ್ರಿಗೆ ಅವಮಾನ ಮಾಡಿದ ಪ್ರಿಯಾಂಕ ಗಾಂಧಿ
ನವದೆಹಲಿ , ಶುಕ್ರವಾರ, 22 ಮಾರ್ಚ್ 2019 (13:57 IST)
ನವದೆಹಲಿ : ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ ಅವಮಾನ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಉತ್ತರ ಪ್ರದೇಶದಲ್ಲಿ ಚುನಾವಣಾ ಪ್ರಚಾರ ನಡೆಸುತ್ತಿರುವ ಪ್ರಿಯಾಂಕ ಗಾಂಧಿ ವಾದ್ರಾ ತಮ್ಮ ಕೊರಳಿನಲ್ಲಿದ್ದ ಹಾರವನ್ನು ತೆಗೆದು ಶಾಸ್ತ್ರಿ ಅವರ ಪುತ್ಥಳಿಗೆ ಹಾಕಿದ್ದಾರೆ. ಬಳಸಲಾದ ಹೂವಿನ ಹಾರವನ್ನು ಶಾಸ್ತ್ರಿ ಅವರ ಪ್ರತಿಮೆಗೆ ಹಾಕಿ ಪ್ರಿಯಾಂಕ ಗಾಂಧಿ ವಾದ್ರಾ ಅವಮಾನ ಮಾಡಿದ್ದಾರೆ.


ಇದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಶೇರ್‌ ಮಾಡಿದ ಕೇಂದ್ರ ಸಚಿವೆ, ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಈ ವಿಡಿಯೋ ಪ್ರಿಯಾಂಕ ಅವರ ನಡೆಗೆ ಸಾಕ್ಷಿಯಾಗಿದೆ. ಇದು ಕಾಂಗ್ರೆಸ್ ಪಕ್ಷದ ಮೌಲ್ಯಗಳನ್ನು ಪ್ರದರ್ಶಿಸುತ್ತದೆ ಎಂದು ಟೀಕಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿ ಮುಖಂಡರು 30 ಕೋಟಿ ರೂ. ಆಮಿಷ ಒಡ್ಡಿದ್ದು ಸುಳ್ಳು ಎಂದ ಜೆಡಿಎಸ್ ಶಾಸಕ