ಪಾಕಿಸ್ತಾನ ಪರ ಬೇಹುಗಾರಿಗೆ: ತನಿಖೆ ವೇಳೆ ಜ್ಯೋತಿ ಮಲ್ಹೋತ್ರಾ ನಡವಳಿಕೆ ಕೇಳಿದ್ರೆ ದಂಗಾಗ್ತೀರಾ

Sampriya
ಸೋಮವಾರ, 26 ಮೇ 2025 (16:23 IST)
ಪಾಕಿಸ್ತಾನ ಪರ ಬೇಹುಗಾರಿಕೆ ಮಾಡಲು ಹೋಗಿ ಇದೀಗ ತನಿಖೆ ಎದುರಿಸುತ್ತಿರುವ ಹರಿಯಾಣ ಮೂಲದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರು ಮೂರು ಪಾಕಿಸ್ತಾನಿ ಗುಪ್ತಚರ ಹ್ಯಾಂಡ್ಲರ್‌ಗಳೊಂದಿಗೆ ಸಂಪರ್ಕದಲ್ಲಿರುವುದನ್ನು ಒಪ್ಪಿಕೊಂಡಿದ್ದಾಳೆ.

ಈ ವಿಷಯದಲ್ಲಿ ತನಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಬಾಯ್ಬಿಟ್ಟಿದ್ದಾಳೆ. ಪಾಕಿಸ್ತಾನ ಮತ್ತು ಭಾರತ ನಡುವೆ ಉದ್ವಿಗ್ನತೆ ಹೆಚ್ಚಾಗುತ್ತಿದ್ದ ಹಾಗೇ ಪಾಕಿಸ್ತಾನಕ್ಕೆ ಸೂಕ್ಷ್ಮ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇಲೆ ಹರಿಯಾಣದ ಜ್ಯೋತಿಯನ್ನು ವಶಕ್ಕೆ ಪಡೆಯಲಾಯಿತು.  

ಉನ್ನತ ಮಟ್ಟದ ಪೊಲೀಸ್ ವಿಚಾರಣೆಯ ಸಮಯದಲ್ಲಿ ಪಾಕಿಸ್ತಾನದ ಮೂವರೊಂದಿಗೆ ಸಂಪರ್ಕದಲ್ಲಿರುವುದಾಗಿ ಹಾಗೂ ಈ ವಿಷಯದಲ್ಲಿ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿಕೊಂಡಿದ್ದಾಳೆ.

ಅಧಿಕೃತ ರಹಸ್ಯ ಕಾಯಿದೆ ಮತ್ತು ಭಾರತೀಯ ನ್ಯಾಯ ಸಂಹಿತಾ (BNS) ಅಡಿಯಲ್ಲಿ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದರೂ, ಮಲ್ಹೋತ್ರಾ ಅವರು ವಿಚಾರಣೆಯ ಸಮಯದಲ್ಲಿ ಶಾಂತವಾಗಿ ಕಾಣಿಸಿಕೊಂಡರು ಮತ್ತು ಯಾವುದೇ ಪಶ್ಚಾತ್ತಾಪವನ್ನು ತೋರಿಸಲಿಲ್ಲ. "ನನಗೆ ಯಾವುದೇ ಪಶ್ಚಾತ್ತಾಪವಿಲ್ಲ" ಎಂದು ಅವರು ತನಿಖಾಧಿಕಾರಿಗಳಿಗೆ ತಿಳಿಸಿದ್ದಾರೆ, ಪಾಕಿಸ್ತಾನಿ ಕಾರ್ಯಕರ್ತರೊಂದಿಗೆ ಅವಳ ಸಂಪರ್ಕದ ವಿವರಗಳು ಹೊರಹೊಮ್ಮಿದವು.

ತನಿಖೆಯಲ್ಲಿ ಭಾಗಿಯಾಗಿರುವ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಜ್ಯೋತಿ ತಾನು ಯಾವುದೇ ತಪ್ಪು ಮಾಡಿಲ್ಲ ಎಂದು ಭಾವಿಸಿದ್ದಾಳೆ. ಈ ವೇಳೆ ಆಕೆ ಮಾಡಿರುವುದು ಸಮರ್ಥನೀಯವಾಗಿರುವುದಾಗಿ ಆಕೆ ನಂಬಿದ್ದಳೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments