ಪಾಟ್ನಾ : ಎಂಟು ತಿಂಗಳ ಗರ್ಭಿಣಿ ಸೇರಿದಂತೆ ಒಂದೇ ಕುಟುಂಬದ ಮೂವರು ಸದಸ್ಯರನ್ನು ಆಸ್ತಿ ವಿವಾದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಕೊಲ್ಲಲು ಪ್ರಯತ್ನಿಸಿದ ಘಟನೆ ಬಿಹಾರದ ದರ್ಭಾಂಗಾದಲ್ಲಿ ನಡೆದಿದೆ.
ಅಕ್ರಮವಾಗಿ ನಮ್ಮ ಜಾಗದಲ್ಲಿ ಬೇರೆ ಕುಟುಂಬ ವಾಸಿಸುತ್ತಿದೆ ಎಂದು ವ್ಯಕ್ತಿಯೊಬ್ಬ ಬುಲ್ಡೋಜರ್ನಿಂದ ಮನೆ ಬಿಳಿಸಲು ಸೂಚಿಸಿದ್ದಾನೆ. ಈ ವೇಳೆ ಎರಡು ಕುಟುಂಬಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ದುಷ್ಕರ್ಮಿಗಳು ಮನೆಯಲ್ಲಿ ವಾಸಿಸುತ್ತಿದ್ದವರ ಮೇಲೆ ಬೆಂಕಿ ಹಚ್ಚಿದ್ದಾರೆ.
ಗರ್ಭಿಣಿ ಎಂಬುದನ್ನು ನೋಡದೇ ಆಕೆಯ ಮೇಲೂ ಬೆಂಕಿ ಹಚ್ಚಿ ಸುಟ್ಟಿದ್ದಾರೆ. ಆದರೆ ಇವರನ್ನು ಕಡ ಸ್ಥಳೀಯರು ತಕ್ಷಣ ಆಸ್ಪತ್ರೆಗೆ ಸೇರಿಸಿದ್ದಾರೆ. ಪ್ರಸ್ತುತ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಹುಡುಕುತ್ತಿದ್ದಾರೆ.
ಗಾಯಗೊಂಡವರನ್ನು ಸಂಜಯ್ ಝಾ(31), ಪಿಂಕಿ(36) ಮತ್ತು ನಿಕ್ಕಿ ಕುಮಾರಿ(20) ಎಂದು ಗುರುತಿಸಲಾಗಿದೆ. ಪ್ರಸ್ತುತ ಇವರನ್ನು ಚಿಕಿತ್ಸೆಗಾಗಿ ಆಸತ್ರೆಗೆ ದಾಖಲಿಸಲಾಗಿದ್ದು, ನಿಕ್ಕಿ ಹುಷಾರಾಗಿ ಮನೆಗೆ ಮರಳಿದ್ದಾರೆ.
ಪ್ರಸ್ತುತ ನಾವು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ಮಾಡಲಾಗಿದೆ. ಶೀಘ್ರದಲ್ಲೇ ಈ ಕೃತ್ಯ ಮಾಡಿದ ದುಷ್ಕರ್ಮಿಗಳನ್ನು ಗುರುತಿಸಲಾಗುವುದು. ಈ ಕೃತ್ಯದ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಆಸ್ತಿ ವಿವಾದ ನಡೆಯುತ್ತಿದ್ದ ಜಾಗದಲ್ಲೇ ಕಳೆದ ನಾಲ್ಕು ದಶಕಗಳಿಂದ ಈ ಕುಟುಂಬ ವಾಸಿಸುತ್ತಿದೆ. ಆದರೆ 2017 ರಲ್ಲಿ, ಶಿವಕುಮಾರ್ ಝಾ ಅವರು ಈ ಆಸ್ತಿಯನ್ನು ಅಕ್ರಮವಾಗಿ ಖರೀದಿಸಿದ್ದಾರೆ. 2019 ರಿಂದ ಈ ವಿವಾದದ ಕೇಸ್ ಪಾಟ್ನಾ ಹೈಕೋರ್ಟ್ನಲ್ಲಿ ನಡೆಯುತ್ತಿದೆ.