Publish Date: Sat, 11 Jun 2022 (12:54 IST)
Updated Date: Sat, 11 Jun 2022 (12:57 IST)
ಕೋಲ್ಕತ್ತಾ : ಪ್ರವಾದಿ ಮೊಹಮ್ಮದ್ ಪೈಗಂಬರ್ ಅವಹೇಳನ ಮಾಡಿದ್ದನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಹೌರಾ ಪೊಲೀಸರು 70 ಜನರನ್ನು ಬಂಧಿಸಿದ್ದಾರೆ.
ಹಿಂಸಾಚಾರದ ಹಿನ್ನೆಲೆಯಲ್ಲಿ ಹೌರಾ ಜಿಲ್ಲೆಯಲ್ಲಿ ಜೂನ್ 13 ಬೆಳಗ್ಗೆ 6 ಗಂಟೆಯವರಗೆ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಕೇಂದ್ರ ಪಡೆಗಳನ್ನು ನಿಯೋಜಿಸುವಂತೆ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿ ಒತ್ತಾಯಿಸಿದೆ.
ಶುಕ್ರವಾರದ ಪ್ರಾರ್ಥನೆಯ ನಂತರ ಜಮ್ಮುಕಾಶ್ಮೀರ, ದೆಹಲಿ, ಉತ್ತರ ಪ್ರದೇಶ, ತೆಲಂಗಾಣ, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನಾಕಾರರು ನೂಪುರ್ ಶರ್ಮಾ ಅವರ ಬಂಧನಕ್ಕೆ ಆಗ್ರಹಿಸಿ ಫಲಕಗಳನ್ನು ಹಿಡಿದುಕೊಂಡು ಪ್ರತಿಭಟಿಸುತ್ತಿದ್ದಾರೆ.