ಪುಲ್ವಾಮಾ ಎನ್‌ಕೌಂಟರ್: ಮೂವರು ಜೈಶ್‌ ಎ ಮೊಹಮ್ಮದ್ ಉಗ್ರರು ಮಟಾಶ್‌

Sampriya
ಗುರುವಾರ, 15 ಮೇ 2025 (17:51 IST)
Photo Credit X
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ತ್ರಾಲ್ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಪುಲ್ವಾಮಾದಲ್ಲಿರುವ ನಾಡರ್ ಗ್ರಾಮದಲ್ಲಿ ಭದ್ರತಾ ಪಡೆಗಳು ಆರಂಭಿಸಿದ ಕಾರ್ಡನ್ ಮತ್ತು ಸರ್ಚ್ ಕಾರ್ಯಾಚರಣೆಯಲ್ಲಿ ಗುಂಡಿನ ಚಕಮಕಿ ಪ್ರಾರಂಭವಾಯಿತು.

ವರದಿಗಳ ಪ್ರಕಾರ ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಗುಂಪಿಗೆ ಸೇರಿದ ಉಗ್ರರು ಎಂದು ಸೂಚಿಸಿವೆ. ಉಗ್ರರನ್ನು ಆಸಿಫ್ ಅಹ್ಮದ್ ಶೇಖ್, ಅಮೀರ್ ನಜೀರ್ ವಾನಿ ಮತ್ತು ಯವರ್ ಅಹ್ಮದ್ ಭಟ್ ಎಂದು ಗುರುತಿಸಲಾಗಿದೆ. ಅವರು ತಮ್ಮ ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಆಶ್ರಯ ಪಡೆಯುತ್ತಿರುವುದನ್ನು ಡ್ರೋನ್ ದೃಶ್ಯಾವಳಿಗಳು ಕಂಡುಬಂದಿದೆ.

ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಭಯೋತ್ಪಾದಕರನ್ನು ಹೊಡೆದುರುಳಿಸಿದ ಕೆಲವೇ ದಿನಗಳಲ್ಲಿ ಇದು ಬಂದಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಡಿಕೆ ಶಿವಕುಮಾರ್ ಬೆಂಬಲಿಗರನ್ನು ತಡೆಯಲು ಸಿದ್ದರಾಮಯ್ಯ ಮಾಸ್ಟರ್ ಪ್ಲ್ಯಾನ್

Karnataka Weather: ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಮುಂದಿನ ಸುದ್ದಿ
Show comments