Publish Date: Sun, 29 Oct 2023 (16:30 IST)
Updated Date: Sun, 29 Oct 2023 (18:09 IST)
ವ್ಯಭಿಚಾರ ಮತ್ತು ಸಮ್ಮತವಲ್ಲದ ಸಲಿಂಗಕಾಮ ಕ್ರಿಮಿನಲ್ ಅಪರಾಧ ಅಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ್ದ ಆದೇಶಗಳನ್ನು ತಿರಸ್ಕರಿಸಿ, ಈ 2 ನಡವಳಿಕೆಗಳನ್ನು ಮತ್ತೆ ಕ್ರಿಮಿನಲ್ ಅಪರಾಧವೆಂದು ಪರಿಗಣಿಸುವಂತೆ ಸಂಸತ್ತಿನ ಸ್ಥಾಯಿ ಸಮಿತಿಯೊಂದು ಸರ್ಕಾರಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ.
ಬಿಜೆಪಿ ಸಂಸದ ಬ್ರಿಜ್ ಲಾಲ್ ನೇತೃತ್ವದ ಸ್ಥಾಯಿ ಸಮಿತಿ ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿದ್ದು, ಅದರಲ್ಲಿ ವ್ಯಭಿಚಾರ, ಸಲಿಂಗಕಾಮ ಸೇರಿದಂತೆ ಹಲವು ವಿಷಯಗಳ ಕುರಿತ ಗಹನವಾದ ಚರ್ಚೆ ನಡೆಸಿದೆ ಎನ್ನಲಾಗಿದೆ.