Select Your Language

Notifications

webdunia
webdunia
webdunia
webdunia

ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಶೇ.50 ರಷ್ಟು ಹೆಚ್ಚಳಕ್ಕೆ ಕೇಂದ್ರ ನಿರ್ಧಾರ

ಗ್ರಾಮ ಪಂಚಾಯಿತಿಗಳಲ್ಲಿ ಮಹಿಳಾ ಮೀಸಲಾತಿ ಶೇ.50 ರಷ್ಟು ಹೆಚ್ಚಳಕ್ಕೆ ಕೇಂದ್ರ ನಿರ್ಧಾರ
ನವದೆಹಲಿ , ಬುಧವಾರ, 2 ಮಾರ್ಚ್ 2016 (16:00 IST)
ಗ್ರಾಮ ಪಂಚಾಯಿತಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರ ಮೀಸಲಾತಿಯನ್ನು ಶೇ.33 ರಿಂದ ಶೇ.50 ಕ್ಕೆ ಹೆಚ್ಚಿಸುವ ಮೀಸಲಾತಿ ಹೆಚ್ಚಿಸುವ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರಕಾರ ನಿರ್ಧರಿಸಿದೆ.
 
ಕಳೆದ 2009ರಲ್ಲಿ ಅಂದಿನ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ನೇತೃತ್ವದ ಸರಕಾರ, ಗ್ರಾಮ ಪಂಚಾಯತಿಗಳಲ್ಲಿ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರ ಮೀಸಲಾತಿಯನ್ನು ಶೇ.33 ರಿಂದ ಶೇ.50ಕ್ಕೆ ಹೆಚ್ಚಿಸುವ ಕುರಿತಂತೆ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಿ, ರಾಜ್ಯಸರಕಾರಗಳ ಅಭಿಪ್ರಾಯವನ್ನು ಸಂಗ್ರಹಿಸಲು ಆದೇಶಿಸಿತ್ತು. ಇದೀಗ ಅದೇ ಮಸೂದೆಯನ್ನು ಜಾರಿಗೊಳಿಸಲು ಸರಕಾರ ಚಿಂತನೆ ನಡೆಸಿದೆ. 
 
ಪಂಚಾಯತ್ ಸಚಿವಾಲಯದ ಕಾರ್ಯದರ್ಶಿ ಮತ್ತು ನಗರಾಭಿವೃದ್ಧಿ ಸಚಿವಾಲಯ ತನ್ನ ವರದಿಯನ್ನು ಸರಕಾರಕ್ಕೆ ರವಾನಿಸಿದ್ದು, ಪ್ರಸಕ್ತ ಬಜೆಟ್ ಅಧಿವೇಶನದಲ್ಲಿಯೇ ಮಸೂದೆಗೆ ಅಂಗೀಕಾರ ಪಡೆದು, ಸರಕಾರದ ಎರಡು ವರ್ಷದ ಸಾಧನೆಯಲ್ಲಿ ಇದನ್ನು ತೋರಿಸುವ ಸಾಧ್ಯತೆಗಳಿವೆ. 
 
ಮಹಿಳಾ ಮೀಸಲಾತಿಗೆ ಯಾವುದೇ ರಾಜಕೀಯ ಪಕ್ಷಗಳು ವಿರೋಧ ವ್ಯಕ್ತಪಡಿಸಿಲ್ಲ. ಆದ್ದರಿಂದ,ಒಂದು ವೇಳೆ ಬಜೆಟ್ ಸಂಸತ್ ಕಲಾಪ ಸುಗಮವಾಗಿ ಸಾಗಿದಲ್ಲಿ ಪ್ರಸಕ್ತ ಬಜೆಟ್‌ನಲ್ಲಿಯೇ ಮಸೂದೆಗೆ ಅಂಗೀಕಾರ ದೊರೆಯಲಿದೆ. 

Share this Story:

Follow Webdunia kannada