ವರದಕ್ಷಿಣೆ ಕಿರುಕುಳ ಪ್ರಕರಣ: ಕೇಸ್‌ನಿಂದ ರಾಧೇ ಮಾ ಹೆಸರು ಗಾಯಬ್

Webdunia
ಮಂಗಳವಾರ, 5 ಜುಲೈ 2016 (19:02 IST)
ಕಳೆದ ವರ್ಷ ಮಹಿಳೆಯೊಬ್ಬಳು ಸ್ವಯಂಘೋಷಿತ ದೇವಮಾನವಿ ರಾಧೇ ಮಾ ವಿರುದ್ಧ ವರದಕ್ಷಿಣೆ ದಾಖಲಿಸಿದ್ದಳು. ಆದರೆ, ಇದೀಗ ಪ್ರಕರಣದಲ್ಲಿ ರಾಧೇ ಮಾ ಹೆಸರು ಆರೋಪ ಪಟ್ಟಿಯಲ್ಲಿ ಇಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.  
 
ಕಂಡೀವಿಲಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ಸುಖವಿಂದರ್ ಕೌರ್ ಅಲಿಯಾಸ್ ರಾಧೇ ಮಾ ಹೆಸರಿಲ್ಲ ಎಂದು ಮೂಲಗಳು ತಿಳಿಸಿವೆ.  
 
ರಾಧೇ ಮಾ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲವಾದ್ದರಿಂದ ಅವರ ಹೆಸರನ್ನು ಆರೋಪ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 
ಏತನ್ಮಧ್ಯೆ, ದೂರು ದಾಖಲಿಸಿದ ಮಹಿಳೆಯ ಪತಿ ಮತ್ತು ಆಕೆಯ ಅತ್ತೆ ಮಾವ ಸೇರಿದಂತೆ ಆರು ಮಂದಿ ವಿರುದ್ಧ ಆರೋಪ ಪಟ್ಟಿ ಸಲ್ಲಿಸಲಾಗಿದೆ. 10 ದಿನಗಳ ಹಿಂದೆ ಚಾರ್ಜ್‌ಶೀಟ್ ಕೋರ್ಟ್‌ಗೆ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
 
ಕಳೆದ ವರ್ಷ 32 ವರ್ಷ ವಯಸ್ಸಿನ ಮಹಿಳೆಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿ, ರಾಧೇ ಮಾ ಭಕ್ತರಾದ ನನ್ನ ಅತ್ತೆ ಮಾವ ಆಕೆಯ ಒತ್ತಡದ ಮೇರೆಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು.
 
ನಂತರ ಪೊಲೀಸರು ರಾಧೇ ಮಾ ರನ್ನು ಪೊಲೀಸ್ ಠಾಣೆಗೆ ಕರೆಸಿಕೊಂಡು ವಿಚಾರಣೆ ನಡೆಸಿದಾಗ ಎಲ್ಲಾ ಆರೋಪಗಳನ್ನು ಆಕೆ ತಳ್ಳಿಹಾಕಿದ್ದಳು.ಪ್ರಕರಕಣದಲ್ಲಿ ಮುಂಬೈ ಕೋರ್ಟ್ ಮಧ್ಯಂತರ ಜಾಮೀನು ನೀಡಿತ್ತು. 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ ಮೊದಲ ಬಾರಿಗೆ ಗೆಲುವಿಗೆ ಪ್ರಧಾನಿ ಮೋದಿಗೆ ಖುಷಿಯೋ ಖುಷಿ

ಜನವರಿ 6 ಕ್ಕೆ ಡಿಕೆ ಶಿವಕುಮಾರ್ ಸಿಎಂ: ಇಕ್ಬಾಲ್ ಹುಸೇನ್ ಮಾತಿಗೆ ಡಿಕೆಶಿ ಹೇಳಿದ್ದೇನು

ತಿರುವನಂತಪುರಂನಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು

ಕಾಂಗ್ರೆಸ್ಸಿಗೆ ಯತೀಂದ್ರ ಹೈಕಮಾಂಡ್ ಆಗಿದ್ದಾರಾ: ವಿಜಯೇಂದ್ರ

ಡಿಕೆ ಶಿವಕುಮಾರ್ ಸಿಎಂ ಆಗುವ ದಿನಾಂಕ ಫಿಕ್ಸ್: ಸ್ಪೋಟಕ ಹೇಳಿಕೆ ನೀಡಿದ ಆಪ್ತ ಶಾಸಕ

ಮುಂದಿನ ಸುದ್ದಿ
Show comments