ನವದೆಹಲಿ : ರಫೇಲ್ ಡೀಲ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಬಗ್ಗೆ ಇಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಲಿದೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ನೇತೃತ್ವದ ತ್ರಿಸದಸ್ಯ ಪೀಠ ಈ ಕುರಿತು ವಿಚಾರಣೆ ನಡೆಸಿದ್ದು, ಈ ಕುರಿತು ಇಂದು ಬೆಳಗ್ಗೆ 10-30ಕ್ಕೆ ತನ್ನ ತೀರ್ಪು ಪ್ರಕಟಿಸಲಿದೆ.
ರಫೆಲ್ ಒಪ್ಪಂದದ ಕುರಿತು ತನಿಖೆಯಾಗಬೇಕೆಂದು ಸಲ್ಲಿಸಿದ PIL ಅರ್ಜಿಯನ್ನು ವಿಚಾರಣೆ ನಡೆಸಿದ್ದು, ರಫೆಲ್ ಒಪ್ಪಂದದಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಕುರಿತು ತನ್ನ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಬೇಕೋ ಅಥವಾ ಬೇಡವೋ ಎಂಬುದರ ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.