ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಮ್ ರಾಜನ್ ವಿರುದ್ಧ ವಾಗ್ದಾಳಿ ಮುಂದುವರಿಸಿರುವ ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ, ಆರ್‌ಬಿಐ ನೀತಿಗಳಿಂದ ಸಣ್ಣ ಕೈಗಾರಿಕೆಗಳು ನಾಶವಾಗುತ್ತಿದ್ದು, ಕೃಷಿ ವಿರೋಧಿಯಾಗಿವೆ ಎಂದು ಟೀಕಿಸಿದ್ದಾರೆ.
ರಾಜನ್ ಅವರ ತಪ್ಪು ನೀತಿಗಳ ಬಗ್ಗೆ ಹೇಳಿಕೆ ನೀಡಿದ್ದೇನೆ. ಅಮೆರಿಕದ ಬಹುರಾಷ್ಟ್ರೀಯ ಕಂಪೆನಿಗಳಿಗೆ ನೆರವಾಗಲು ದೇಶದ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಅಂತ್ಯ ಕಾಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬ್ಯಾಂಕಿಂಗ್ ನೀತಿಗಳು ಕೃಷಿ ವಿರೋಧಿಯಾಗಿವೆ. ನಾನು ಪ್ರಧಾನಿ ಮೋದಿಯವರಿಗೆ ರಾಜನ್ ವಿರುದ್ಧದ ಆರು ಅಂಶಗಳ ಪಟ್ಟಿಯನ್ನು ನೀಡಿದ್ದೇನೆ ಎಂದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ಕೂಡಲೇ ರಘುರಾಮ್ ರಾಜನ್ ಅವರನ್ನು ವಜಾಗೊಳಿಸಬೇಕು ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯಂ ಸ್ವಾಮಿ ಒತ್ತಾಯಿಸಿದ್ದಾರೆ.
ವೆಬ್‌ದುನಿಯಾ
ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.