ಅಮೇಥಿಯಿಂದ ರಾಹುಲ್, ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧೆ

Webdunia
ಶನಿವಾರ, 19 ಆಗಸ್ಟ್ 2023 (12:04 IST)
ನವದೆಹಲಿ : ಕಾಂಗ್ರೆಸ್  ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರೈ ಶುಕ್ರವಾರ ಹೇಳಿದ್ದಾರೆ.
 
ರಾಹುಲ್ ಗಾಂಧಿಯವರ ಸ್ಪರ್ಧೆ ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ನೇರ ಹಣಾಹಣಿಗೆ ಕಾರಣವಾಗುವುದರಿಂದ ಕೂತುಹಲಕ್ಕೆ ಕಾರಣವಾಗಲಿದೆ.

2019ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಅಮೇಥಿಯಲ್ಲಿ ಸುಮಾರು 55,000 ಮತಗಳ ಅಂತರದಿಂದ ರಾಹುಲ್ ಅವರನ್ನು ಸೋಲಿಸಿದ್ದರು. ವಯನಾಡ್ ಲೋಕಸಭಾ ಕ್ಷೇತ್ರದಿಂದ ಸಹ ಸ್ಪರ್ಧಿಸಿದ್ದ ರಾಹುಲ್ ಅಲ್ಲಿ ಗೆಲುವು ಸಾಧಿಸಿದ್ದರು. 

ಅಲ್ಲದೇ ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲು ನಿರ್ಧರಿಸಿದರೆ, ಅವರ ಗೆಲುವಿಗೆ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸುತ್ತಾರೆ ಎಂದು ಇದೇ ವೇಳೆ ಅಜಯ್ ರೈ ಹೇಳಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂ ಧರ್ಮವಲ್ಲ ಬೈಗುಳದ ಶಬ್ಧ, ಬ್ರಾಹ್ಮಣರು ಗುಲಾಮರಾಗಿಸಲು ಹುಟ್ಟುಹಾಕಿದ್ದು: ನಿವೃತ್ತ ಜಡ್ಜ್

ಸಿಎಂ ಮಗ ಎಂಬ ಕಾರಣಕ್ಕೆ ಯತೀಂದ್ರ ವಿರುದ್ಧ ಕ್ರಮ ಇಲ್ವಾ: ರಾಮಲಿಂಗಾ ರೆಡ್ಡಿ ಪ್ರತಿಕ್ರಿಯೆ ಏನು

ಪುತ್ರ ಯತೀಂದ್ರನಿಗೇ ಸಿದ್ದರಾಮಯ್ಯ ಕೊಟ್ಟ ವಾರ್ನಿಂಗ್ ಏನು ಗೊತ್ತಾ

ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದ ಯತೀಂದ್ರ ಡಿಕೆ ಶಿವಕುಮಾರ್ ಶಾಕಿಂಗ್ ಕೌಂಟರ್

Karnataka Weather: ಇಂದು ಯಾವ ಜಿಲ್ಲೆಗಳಿಗೆ ಚಳಿ ಹೆಚ್ಚು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments