Select Your Language

Notifications

webdunia
webdunia
webdunia
webdunia

Rahul Gandhi: ರೇಪ್ ಮಾಡಲೆತ್ನಿಸಿ ಹತ್ಯೆಯಾದ ಅಬ್ದುಲ್ ಕುಟುಂಬಕ್ಕೆ ಪರಿಹಾರ ಕೊಟ್ಟರಾ ರಾಹುಲ್ ಗಾಂಧಿ

Rahul Gandhi

Krishnaveni K

ರಾಂಚಿ , ಶನಿವಾರ, 17 ಮೇ 2025 (14:15 IST)
ರಾಂಚಿ: ಅತ್ಯಾಚಾರಕ್ಕೆ ಯತ್ನಿಸಿದ್ದ ಅಬ್ದುಲ್ ಎಂಬಾತನ ಕುಟುಂಬಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ 1 ಲಕ್ಷ ರೂ ಪರಿಹಾರ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಆಂಗ್ಲ ಮಾಧ್ಯಮವೊಂದರ ವರದಿ ಪ್ರಕಾರ ಜಾರ್ಖಂಡ್ ನಲ್ಲಿ ಅಬ್ದುಲ್ ಎಂಬ ಅನ್ಯ ಕೋಮಿನ ವ್ಯಕ್ತಿ ಸ್ನಾನಕ್ಕೆಂದು ಹೋಗಿದ್ದ ಬುಡಕಟ್ಟು ಜನಾಂಗದ ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ.  ಈ ವೇಳೆ ಗ್ರಾಮಸ್ಥರೇ ಆತನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿದ್ದರಿಂದ ಸಾವನ್ನಪ್ಪಿದ್ದಾನೆ.

ಈತನ ಕುಟುಂಬಕ್ಕೆ ರಾಹುಲ್ ಗಾಂಧಿ 1 ಲಕ್ಷ ರೂ. ಪರಿಹಾರ ಒದಗಿಸಿದ್ದಾರೆ ಎಂದು ಆರೋಪಿಸಲಾಗಿದೆ. ಪರಿಹಾರ ಮಾತ್ರವಲ್ಲದೆ, ಆತನ ಕುಟುಂಬಕ್ಕೂ ನೆರವಾಗುವಂತೆ ಜಾರ್ಖಂಡ್ ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ.

ಅದರಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಅಬ್ದುಲ್ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಮತ್ತು ಆತನ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರೀ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ ಎಂದು ಮಾಧ್ಯಮ ವರದಿ ಹೇಳಿದೆ. ಅಬ್ದುಲ್ ಮಾವ ಮಾನಸಿಕ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರ. ಅವರ ಕುಟುಂಬ ಬಡತನದಲ್ಲಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ