Daily Horoscope

Select Your Language

Notifications

webdunia
webdunia
webdunia
webdunia

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

Congress Leader Rahul Gandhi
Photo Credit X
ನವದೆಹಲಿ: ಈಚೆಗೆ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯಗೆ  ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮಹತ್ವದ ಸಲಹೆ ನೀಡಿದ್ದಾರೆ.

ದೆಹಲಿ ಭೇಟಿ ವೇಳೆ ರಾಹುಲ್ ಗಾಂಧಿ ಅವರನ್ನು ಭೇಟಿಯಾದ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಲಾಯಿತು. 

ಈ ವೇಳೆ ರಾಜಕೀಯ ನಿವೃತ್ತಿ ಬಗ್ಗೆ ಸಾರ್ವಜನಿಕವಾಗಿ ಪದೇಪದೇ ಮಾತನಾಡುವುದರಿಂದ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡುವುದರ ಜತೆಗೆ  ಸಾರ್ವಜನಿಕ ವಲಯಕ್ಕೂ ತಪ್ಪು ಸಂದೇಶ ರವಾನೆಯಾಗುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಇಂತಹ ಬಹಿರಂಗ ಹೇಳಿಕೆಗಳನ್ನು ನೀಡದಿರುವುದು ಸೂಕ್ತ ಎಂದು ರಾಹುಲ್ ಗಾಂಧಿ ಸಲಹೆ ನೀಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ. 

ಇನ್ನೂ ರಾಹುಲ್‌ ಗಾಂಧಿ ಸಲಹೆಗೆ  ಸಕಾರಾತ್ಮಕವಾಗಿ ಉತ್ತರಿಸಿದ ಸಿದ್ದರಾಮಯ್ಯ, ತಮ್ಮ ಹೇಳಿಕೆಯ ಹಿಂದಿನ ಸ್ಪಷ್ಟ ಉದ್ದೇಶವನ್ನು ವಿವರಿಸಿದ್ದಾರೆ. 

ಈ ವೇಳೆ ಅವರು ನಾನು ರಾಜಕೀಯದಿಂದ ನಿವೃತ್ತಿಯಾಗುವ ಕುರಿತಷ್ಟೇ ಮಾತನಾಡಿದ್ದೇನೆ. 

Share this Story:

Follow Webdunia kannada

ಮುಂದಿನ ಸುದ್ದಿ

Ganesha Festival 2026: ಬೆಂಗಳೂರಿನಿಂದ ಊರಿಗೆ ತೆರಳುವವರಿಗೆ ಕೆಎಸ್‌ಆರ್‌ಟಿಸಿಯಿಂದ ಗುಡ್‌ನ್ಯೂಸ್‌