ಮದ್ಯ ಅಥವಾ ಮಾದಕವಸ್ತು ಸೇವಿಸಿ ರಾಹುಲ್ ಗಾಂಧಿ ಸಂಸತ್ತಿಗೆ ಬರುತ್ತಾರೆ: ಕಂಗನಾ ಕಿಡಿ

Sampriya
ಗುರುವಾರ, 1 ಆಗಸ್ಟ್ 2024 (14:12 IST)
Photo Courtesy X
ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಅವರು ಮದ್ಯ ಅಥವಾ ಮಾದಕವಸ್ತು ಸೇವಿಸಿ ಸಂಸತ್ತಿಗೆ ಬರುತ್ತಾರೆ. ಅವರನ್ನು ಪರೀಕ್ಷೆಗೆ ಒಳಪಡಿಸಬೇಕು ಎಂದು ಹಿಮಾಚಲ ಪ್ರದೇಶದ ಸಂಸದೆ, ನಟಿ ಕಂಗನಾ ರನೌತ್‌ ಒತ್ತಾಯಿಸಿದ್ದಾರೆ

 'ದೇಶವನ್ನು ಚಕ್ರವ್ಯೂಹದಲ್ಲಿ ಸಿಲುಕಿಸಲಾಗಿದೆ' ಎಂದು ರಾಹುಲ್‌ ಗಾಂಧಿ ಅವರು  ಆರೋಪಿಸಿ ಲೋಕಸಭೆಯಲ್ಲಿ ಇತ್ತೀಚೆಗೆ ಮಾಡಿದ್ದ ಭಾಷಣದ ಬಗ್ಗೆ ಕಂಗನಾ ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

ಪ್ರಧಾನಿಯವರು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿದ್ದಾರೆ. ಇಡೀ ದೇಶ ಪ್ರಧಾನಿ ಅವರನ್ನು ಆಯ್ಕೆ ಮಾಡಿದೆ. ಹಾಗಿದ್ದಾಗ, ರಾಹುಲ್‌ ಗಾಂಧಿಯವರು ಪ್ರಜಾಪ್ರಭುತ್ವವನ್ನು ಗೌರವಿಸುವುದಿಲ್ಲವೇ? ಪ್ರಧಾನ ಮಂತ್ರಿಯನ್ನು ಲಿಂಗ, ವಯಸ್ಸು, ಸಾಮಾಜಿಕ ಸ್ಥಾನಮಾನ ಅಥವಾ ಜಾತಿಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆಯೇ? ಇಂತಹ ಹೇಳಿಕೆಗಳನ್ನು ನೀಡುವ ಮೂಲಕ ಅವರು ಸಂವಿಧಾನವನ್ನು ನಿರಂತರವಾಗಿ ಅವಮಾನಿಸಿದ್ದಾರೆ ಎಂದು ಕಂಗನಾ ಕಿಡಿಕಾರಿದ್ದಾರೆ.

ರಾಹುಲ್‌ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲೆ ಗೌರವವಿಲ್ಲವೇ? ಸಂಸತ್ತಿನಲ್ಲಿ ನಿನ್ನೆಯೂ ಹಾಸ್ಯ ಪ್ರದರ್ಶನ ನೀಡಿದ್ದಾರೆ. ಅವರಿಗೆ ನೀತಿ ನಿಯಮಗಳ ಅರಿವಿಲ್ಲ. ಲೋಕಸಭೆಯಲ್ಲಿ ತಮ್ಮನ್ನು ತಾವು ಈಶ್ವರನ ದೇಶದವರು ಎಂತಲೂ, ಬಿಜೆಪಿಯವರು ಚಕ್ರವ್ಯೂಹ ರಚಿಸಿದ್ದಾರೆ ಎಂದೂ ಹೇಳಿದ್ದಾರೆ. ಅವರು ಯಾವುದೇ ರೀತಿಯ ಮಾದಕ ವಸ್ತು ಸೇವಿಸಿದ್ದಾರೆಯೇ ಎಂಬುದನ್ನು ಪರೀಕ್ಷಿಸಬೇಕು ಎಂದಿದ್ದಾರೆ.

ರಾಹುಲ್‌ ಅವರು ಮಾದಕ ವಸ್ತು ಸೇವಿಸುತ್ತಾರೆ ಎಂದು ಆರೋಪಿಸುತ್ತಿದ್ದೀರಾ ಎಂದು ಕೇಳಿದ್ದಕ್ಕೆ, ಇಂತಹ ಹೇಳಿಕೆ ನೀಡುವ ವ್ಯಕ್ತಿಗಳು ತಮ್ಮ ಹಿಡಿತದಲ್ಲಿ ತಾವಿದ್ದಾರೆ ಎಂದು ಭಾವಿಸುತ್ತೀರಾ ಎಂದು ಮರು ಪ್ರಶ್ನೆ ಎಸೆದಿದ್ದಾರೆ.

 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ