ನವದೆಹಲಿ: ಬಿಹಾರದಲ್ಲಿ ವಿಧಾನಸಭೆ ಚುನಾವಣೆ ಸೋಲುತ್ತಿದ್ದಂತೇ ಕಾಂಗ್ರೆಸ್ ಬೆಂಬಲಿಗರು ಸೋಷಿಯಲ್ ಮೀಡಿಯಾದಲ್ಲಿ ಸೋತರೂ ಭಾರತೀಯರ ಹೃದಯದಲ್ಲಿ ನೀವಿದ್ದೀರಿ ಎಂದು ರಾಹುಲ್ ಗಾಂಧಿ ಬೆಂಬಲಿಸಿ ಪೋಸ್ಟ್ ಮಾಡುತ್ತಿದ್ದಾರೆ. ಇದಕ್ಕೆ ಬಿಜೆಪಿ ಬೆಂಬಲಿಗರೂ ಸಖತ್ ಕೌಂಟರ್ ಕೊಡುತ್ತಿದ್ದಾರೆ.
ಬಿಹಾರದಲ್ಲಿ ಗೆಲುವಿನ ಬಗ್ಗೆ ಕಾಂಗ್ರೆಸ್ ಭಾರೀ ನಿರೀಕ್ಷೆಯಿಟ್ಟುಕೊಂಡಿತ್ತು. ಆದರೆ ಇಲ್ಲೂ ಕಾಂಗ್ರೆಸ್ ಹೀನಾಯವಾಗಿ ಸೋತಿದೆ. ರಾಹುಲ್ ಗಾಂಧಿ ನಾಯಕತ್ವದಲ್ಲಿ ಪಕ್ಷಕ್ಕೆ ಮತ್ತೊಂದು ಸೋಲಾಗಿದೆ. ಈ ಬಗ್ಗೆ ಬಿಜೆಪಿ ಲೇವಡಿ ಮಾಡಿದೆ.
ಇದರ ಬೆನ್ನಲ್ಲೇ ಕಾಂಗ್ರೆಸ್ ಬೆಂಬಲಿಗರು ರಾಹುಲ್ ಗಾಂಧಿ ಪರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ನೀವು ಸೋತಿರಬಹುದು. ಆದರೆ ಪ್ರತಿಯೊಬ್ಬ ಭಾರತೀಯ ಹೃದಯದಲ್ಲಿದ್ದೀರಿ. ನಿಮ್ಮ ಜೊತೆಗೆ ನಾವಿದ್ದೇವೆ. ಗೆಲುವಿನ ಸಂದರ್ಭದಲ್ಲಿ ಇರುತ್ತೇವೋ ಗೊತ್ತಿಲ್ಲ, ಸೋತಾಗ ನಿಮ್ಮ ಜೊತೆಗೆ ಇರುತ್ತೇವೆ ಎಂದೆಲ್ಲಾ ಪೋಸ್ಟ್ ಮಾಡಿದ್ದಾರೆ.
ಇದಕ್ಕೆ ಬಿಜೆಪಿ ಬೆಂಬಲಿಗರು ಸಖತ್ ಕೌಂಟರ್ ಕೊಟ್ಟಿದ್ದಾರೆ. ಭಾರತೀಯರು ಎಲ್ಲರೂ ಎನ್ನುವುದು ಸರಿಯಿಲ್ಲ. ಯಾಕೆಂದರೆ ನಮ್ಮ ಹೃದಯದಲ್ಲಿ ಇಲ್ಲ ಎಂದು ಕೆಲವರು ಹೇಳಿದರೆ, ಅಬ್ಬಾ ಸೋತರೂ ಏನು ನಿಷ್ಠೆ ಎಂದು ಕೆಲವರು ಕಾಲೆಳೆದಿದ್ದಾರೆ.