Publish Date: Sat, 20 Jan 2018 (10:20 IST)
Updated Date: Sat, 20 Jan 2018 (10:22 IST)
ನವದೆಹಲಿ: ಪ್ರಧಾನಿ ಮೋದಿ ತಾವು ಪ್ರತೀ ತಿಂಗಳ ಅಂತ್ಯಕ್ಕೆ ನಡೆಸುವ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಯಾವ ವಿಷಯದ ಬಗ್ಗೆ ಮಾತನಾಡಬೇಕೆಂದು ಐಡಿಯಾ ಕೊಡುವಂತೆ ಪ್ರತೀ ಬಾರಿ ಜನರಿಗೆ ಮನವಿ ಮಾಡುತ್ತಾರೆ.
ಈ ಬಾರಿ ಪ್ರಧಾನಿ ಮೋದಿಗೆ ಸ್ವತಃ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಐಡಿಯಾ ಕೊಟ್ಟಿದ್ದಾರೆ. ಮೂರು ವಿಷಯದ ಬಗ್ಗೆ ನಿಮ್ಮ ಮನ್ ಕೀ ಬಾತ್ ನಲ್ಲಿ ಹೇಳಿ ಎಂದು ರಾಹುಲ್ ವ್ಯಂಗ್ಯವಾಗಿ ಹೇಳಿದ್ದಾರೆ.
ಡೋಕ್ಲಾಂ ವಿವಾದ, ಅತ್ಯಾಚಾರ ಪ್ರಕರಣಗಳು ಮತ್ತು ನಿರುದ್ಯೋಗ ಸಮಸ್ಯೆ ಬಗ್ಗೆ ಮಾತನಾಡಿ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ಮೋದಿ ಮನ್ ಕೀ ಬಾತ್ ಕಾರ್ಯಕ್ರಮವನ್ನು ಟೀಕಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ