Publish Date: Sat, 12 Oct 2019 (08:14 IST)
Updated Date: Sat, 12 Oct 2019 (08:17 IST)
ನವದೆಹಲಿ : ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು 'ಕೊಲೆ ಆರೋಪಿ' ಎಂದ ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಕೋರ್ಟ್ ಜಾಮೀನು ನೀಡಿದೆ.
ಕಳೆದ ವರ್ಷದ ಏಪ್ರಿಲ್ 23ರಂದು ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರದ ವೇಳೆ ಜನರನ್ನುದ್ದೇಶಿಸಿ ಮಾತಾಡಿದ್ದ ರಾಹುಲ್ ಗಾಂಧಿ, ಅಮಿತ್ ಶಾ ಕೊಲೆ ಪ್ರಕರಣವೊಂದರಲ್ಲಿ ಪ್ರಮುಖ ಆರೋಪಿ ಎಂದು ಟೀಕಿಸಿದ್ದರು. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ವಿರುದ್ಧ ದೂರು ದಾಖಲಾಗಿತ್ತು.
ಈ ಪ್ರಕರಣದ ವಿಚಾರಣೆ ನಡೆಸಿದ ಅಹ್ಮದಾಬಾದ್ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಲವೂ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಸಾವಿರ ರೂ. ಬಾಂಡ್ ಮೇಲೆ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ. ಅಲ್ಲದೇ ಮುಂದಿನ ಡಿಸೆಂಬರ್ 7ಕ್ಕೆ ಪ್ರಕರಣದ ವಿಚಾರಣೆ ಮುಂದೂಡಿದೆ.