Webdunia - Bharat's app for daily news and videos

Install App

ರಾಹುಲ್ ಗಾಂಧಿ-ಪರಮೇಶ್ವರ್ ಮಹತ್ವದ ಸಮಾಲೋಚನೆ

Webdunia
ಶುಕ್ರವಾರ, 24 ಜುಲೈ 2015 (11:10 IST)
ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದ್ದ ಎಐಸಿಸಿ ಉಪಾಧ್ಯಕ್ಷ ರಾಹುಲ್‍ಗಾಂಧಿ ಶುಕ್ರವಾರ ಬೆಳಗ್ಗೆ ಆಂಧ್ರ ಅನಂತಪುರದಲ್ಲಿರುವ ಪುಟ್ಟಪರ್ತಿಗೆ ತೆರಳಲಿದ್ದಾರೆ.
 
ಕೇರಳದ ತಿರುಚ್ಚಿಯಲ್ಲಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನಕ್ಕೆ ಬಂದಿಳಿದ ರಾಹುಲ್ ಗಾಂಧಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಸ್ವಾಗತಿಸಿದರು.
 
ರಾಜ್ಯ ಕಾಂಗ್ರೆಸ್ ನಾಯಕರ ಜತೆ ಮಾತನಾಡಿದ ರಾಹುಲ್ ರಾಜ್ಯದಲ್ಲಿ ಆತಂಕಕಾರಿಯಾಗಿ ಬೆಳೆಯುತ್ತಿರುವ ರೈತರ ಆತ್ಮಹತ್ಯೆ ಕುರಿತು ಅಸಮಾಧಾನ ವ್ಯಕ್ತ ಪಡಿಸಿದ್ದಾರೆ ಎನ್ನಲಾಗುತ್ತಿದೆ. 
 
ದೇವನಹಳ್ಳಿ ಬಳಿಯ ಕ್ಲಾಕ್ರ್ಸ್ಎಕ್ಸಾಟಿಕಾ ರೆಸ್ಟೋರೆಂಟ್‌ನಲ್ಲಿ ರಾತ್ರಿ ಕಳೆದ ರಾಹುಲ್ ಗಾಂಧಿಯವರನ್ನು ಇಂದು ಮುಂಜಾನೆ 6.30ರ ಸುಮಾರಿಗೆ ಭೇಟಿಯಾದ  ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಹಾಗೂ ಯುವ ಕಾಂಗ್ರೆಸ್ ಅಧ್ಯಕ್ಷ ರಿಜ್ವಾನ್ ಹರ್ಷದ್ 30 ನಿಮಿಷಕ್ಕೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
 
ನಂತರ ಸುಮಾರು 7 ಗಂಟೆಯ ಸುಮಾರಿಗೆ ರಸ್ತೆ ಮಾರ್ಗವಾಗಿ ಪುಟ್ಟಪರ್ತಿಗೆ ತೆರಳಿದರು. ಅವರ ಪ್ರಯಾಣದ ಹಿನ್ನೆಲೆಯಲ್ಲಿ ಕರ್ನಾಟಕ ಮತ್ತು ಆಂಧ್ರಪ್ರದೇಶದ ಪೊಲೀಸರು ರಾಷ್ಟ್ರೀಯ ಹೆದ್ದಾರಿ 7 ರಲ್ಲಿ ಬಿಗಿ ಭದ್ರತೆ ಕೈಗೊಂಡಿದ್ದಾರೆ. 
 
ಮುಂದಿನ ವಾರ ಮತ್ತೆ ರಾಜ್ಯಕ್ಕೆ ಭೇಟಿ ನೀಡಲಿರುವ ರಾಹುಲ್ ಆತ್ಮಹತ್ಯೆ ಮಾಡಿಕೊಂಡ ರೈತರ ಮನೆಗಳಿಗೆ ಭೇಟಿ ನೀಡಲಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments