Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಡಿಸೆಂಬರ್ 1 ರಂದು ರಾಹುಲ್ ಗಾಂಧಿಗೆ ಕಾಂಗ್ರೆಸ್ ಅಧ್ಯಕ್ಷ ಪಟ್ಟ?

webdunia
ಭಾನುವಾರ, 19 ನವೆಂಬರ್ 2017 (14:46 IST)
ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅನಾರೋಗ್ಯದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಪಟ್ಟ ನೀಡುವ ಬಗ್ಗೆ ಎಐಸಿಸಿಯಲ್ಲಿ ಚಿಂತನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.  
 
ಗುಜರಾತ್ ವಿಧಾನಸಭೆ ಚುನಾವಣೆ ಪ್ರಚಾರದಲ್ಲಿ ರಾಹುಲ್ ಗಾಂಧಿ ಜನರನ್ನು ಆಕರ್ಷಿಸುವುಲ್ಲಿ ಸಫರಾದ ಹಿನ್ನೆಲೆಯಲ್ಲಿ ಅವರಿಗೆ ಚುನಾವಣೆಗಿಂತ ಮುಂಚಿತವಾಗಿಯೇ ಅಧ್ಯಕ್ಷ ಸ್ಥಾನ ನೀಡುವುದು ಸೂಕ್ತ ಎನ್ನುವ ನಿರ್ಧಾರಕ್ಕೆ ಎಐಸಿಸಿ ಬಂದಿದೆ ಎನ್ನಲಾಗುತ್ತಿದೆ.   
 
ನಾಳೆ ನಡೆಯಲಿರುವ ಎಐಸಿಸಿ ಕಾರ್ಯಕಾರಿ ಸಭೆಯಲ್ಲಿ ರಾಹುಲ್ ಗಾಂಧಿಯವರಿಗೆ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಮಹತ್ವವಾದ ಚರ್ಚೆ ನಡೆಯಲಿದೆ ಎನ್ನಲಾಗುತ್ತಿದೆ. ಅದಕ್ಕೆ ಸೋನಿಯಾ ಕೂಡಾ ಹಸಿರು ನಿಶಾನೆ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಿಂದ ಬಲಿಷ್ಠಗೊಳಿಸಲು ರಾಹುಲ್ ಗಾಂಧಿಯವರಿಗೆ ಸಂಪೂರ್ಣ ಅಧಿಕಾರ ನೀಡಬೇಕು ಎನ್ನುವ ಕಾರಣಕ್ಕೆ ಅವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಲಾಗುತ್ತಿದೆ ಎಂದು ಎಐಸಿಸಿ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಮಧ್ವರಾಜ್ ನೀನು ಬಿಜೆಪಿ ಸೇರುತ್ತೀಯಾ?: ಸಿಎಂ ನೇರ ಪ್ರಶ್ನೆ