Publish Date: Sat, 25 May 2019 (08:23 IST)
Updated Date: Sat, 25 May 2019 (08:25 IST)
ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ಹಿನ್ನಲೆಯಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ.
ಇಂದು ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಹುಲ್ ಗಾಂಧಿ ತಮ್ಮ ರಾಜೀನಾಮೆ ಪ್ರಸ್ತಾಪ ಮಾಡುವ ಸಾಧ್ಯತೆಯಿದೆ. ಲೋಕಸಭೆ ಚುನಾವಣೆಯ ಸೋಲಿನ ಹೊಣೆ ಹೊತ್ತು ರಾಹುಲ್ ರಾಜೀನಾಮೆಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಆದರೆ ಅವರ ರಾಜೀನಾಮೆಯನ್ನು ಪಕ್ಷ ಪುರಸ್ಕರಿಸುವ ಸಾಧ್ಯತೆ ಕಡಿಮೆ. ಸದ್ಯಕ್ಕೆ ಕಾಂಗ್ರೆಸ್ ನಲ್ಲಿ ಅಂತಹ ನಾಯಕರಿಲ್ಲದ ಕಾರಣ ರಾಹುಲ್ ಅವರನ್ನೇ ಮುಂದುವರಿಸಲು ಪಕ್ಷ ತೀರ್ಮಾನಿಸಬಹುದು.