Webdunia - Bharat's app for daily news and videos

Install App

ಬಿಜೆಪಿ, ಆರ್ ಎಸ್ಎಸ್ ನೋಡಿ ಕಲೀರಿ ಎಂದರಾ ರಾಹುಲ್ ಗಾಂಧಿ? ವಿವಾದವಾಗುತ್ತಿದ್ದಂತೆ ವಿಡಿಯೋ ಡಿಲೀಟ್?!

Webdunia
ಸೋಮವಾರ, 23 ಜುಲೈ 2018 (10:52 IST)
ನವದೆಹಲಿ: ಕಾಂಗ್ರೆಸ್ ಕಾರ್ಯಕಾರಿ ಸಭೆ ನಿನ್ನೆ ದೆಹಲಿಯಲ್ಲಿ ನಡೆದಿದ್ದು, ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಬಿಜೆಪಿ ಮತ್ತು ಆರ್ ಎಸ್ಎಸ್ ನೋಡಿ ಕಲಿಯಿರಿ ಎಂದು ಕಾರ್ಯಕರ್ತರಿಗೆ ಕರೆಕೊಟ್ಟರಾ?

ಹೀಗೊಂದು ವಿವಾದ ಇದೀಗ ಸೃಷ್ಟಿಯಾಗಿದೆ. ರಾಹುಲ್ ಗಾಂಧಿ ತಮ್ಮ ಭಾಷಣದಲ್ಲಿ ಬಿಜೆಪಿ ಮತ್ತು ಆರ್ ಎಸ್ಎಸ್ ನಡುವಿನ ಸಾಮರಸ್ಯ ನೋಡಿ ಕಲಿಯುವಂತೆ ಹೇಳಿದ್ದು ಕಾಂಗ್ರೆಸ್ ಯೂ ಟ್ಯೂಬ್ ನಲ್ಲಿ ಅಪ್ ಲೋಡ್ ಮಾಡಿದ್ದ ವಿಡಿಯೋದಲ್ಲಿ ಉಲ್ಲೇಖವಾಗಿತ್ತು ಎನ್ನಲಾಗಿದೆ. ಆದರೆ ಈ ವಿಡಿಯೋ ವಿವಾದವಾಗುತ್ತಿದ್ದಂತೆ ಕಾಂಗ್ರೆಸ್ ಇದನ್ನು ಡಿಲೀಟ್ ಮಾಡಿದೆ ಎಂದು ಆಂಗ್ಲ ಮಾಧ್ಯಮವೊಂದು ವರದಿ ಮಾಡಿದೆ.

ದಲಿತರು ಮೊದಲು ಕಾಂಗ್ರೆಸ್ ಗೆ ವೋಟ್ ಹಾಕುತ್ತಿದ್ದರು. ಆದರೆ ಈಗ ಬಿಜೆಪಿ ಪರ ಹಾಕುತ್ತಿದ್ದಾರೆ. ಇದಕ್ಕೆ ಕಾರಣ ಬಿಜೆಪಿ ದಲಿತರ ಕೇರಿಗಳಿಗೆ ತಲುಪಿದೆ ಎಂದು ರಾಹುಲ್ ಹೇಳಿದ್ದರು ಎನ್ನಲಾಗಿದೆ.

ಇದೇ ಸಂದರ್ಭದಲ್ಲಿ ಕಾರ್ಯಕರ್ತರು ತಮ್ಮ ಪಕ್ಷ ಗೆಲ್ಲಿಸಿಕೊಟ್ಟರೆ ಪಕ್ಷದಿಂದ ಯಾವುದೇ ಪ್ರತಿಫಲ ಸಿಗುವುದಿಲ್ಲ. ಆದರೆ ಬಿಜೆಪಿಯಲ್ಲಿ ಪಕ್ಷದ ಅಭ್ಯರ್ಥಿ ಗೆದ್ದಾಗ ಕಾರ್ಯಕರ್ತರಿಗೆ ಉಡುಗೊರೆ ನೀಡಲಾಗುತ್ತದೆ ಎಂದು ಅಳಲು ತೋಡಿಕೊಂಡರು ಎನ್ನಲಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ರಾಹುಲ್, ಕಾರ್ಯಕರ್ತರನ್ನು ಪಕ್ಷ ಚೆನ್ನಾಗಿ ನೋಡಿಕೊಳ್ಳಬೇಕು ಎಂದಿದ್ದಾರೆ ಎನ್ನಲಾಗಿದೆ. ಆದರೆ ಈ ವಿವಾದಾತ್ಮಕ ಅಂಶಗಳಿದ್ದ ವಿಡಿಯೋವನ್ನು ಡಿಲೀಟ್ ಮಾಡಲಾಗಿದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದ್ವಿಚಕ್ರ ವಾಹನ ಸವಾರರಿಗೆ ಯೋಗಿ ಸರ್ಕಾರ ಶಾಕ್‌: ಇನ್ನು ಮುಂದೆ ಹೆಲ್ಮೆಟ್‌ ಧರಿಸದಿದ್ದರೆ ಪೆಟ್ರೋಲ್‌ ಸಿಗಲ್ಲ

ಹೈಕಮಾಂಡ್‌ ಮೆಚ್ಚಿಸಲು ಡಿಕೆ ಶಿವಕುಮಾರ್‌ ಹೀಗೇ ನಡೆದುಕೊಳ್ಳುತ್ತಿದ್ದಾರೆ: ಶೋಭಾ ಕರಂದ್ಲಾಜೆ

ಡಿಕೆ ಶಿವಕುಮಾರ್ ಹಾಗೇ ಹೇಳಬಾರದಿತ್ತು: ಮಲ್ಲಿಕಾರ್ಜುನ ಖರ್ಗೆ

ಭೀಕರ ಪ್ರವಾಹಕ್ಕೆ ತುತ್ತಾದ ಜಮ್ಮು ಪ್ರದೇಶದಿಂದ 5000 ಸಾವಿರ ಮಂದಿ ಸ್ಥಳಾಂತರ

ಎಸ್‌ಐಟಿ ಶೋಧದ ವೇಳೆ ಮಹೇಶ್ ಶೆಟ್ಟಿ ಮನೆಯಲ್ಲಿ ಸಿಕ್ತು ಊಹಿಸಲಾಗದ ವಸ್ತು

ಮುಂದಿನ ಸುದ್ದಿ
Show comments