Publish Date: Wed, 03 Apr 2024 (12:49 IST)
Updated Date: Wed, 03 Apr 2024 (13:13 IST)
ವಯನಾಡು: ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ವಯನಾಡು ಕ್ಷೇತ್ರದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ರೋಡ್ ಶೋ ನಡೆಸಿದ್ದಾರೆ.
ನಾಮಪತ್ರ ಸಲ್ಲಿಕೆಗೆ ಮೊದಲು ರಾಹುಲ್ ಗಾಂಧಿ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಸಹೋದರಿ ಪ್ರಿಯಾಂಕ ವಾದ್ರಾ ಸಾಥ್ ನೀಡಿದರು. ಜೊತೆಗೆ ಕೆ.ಸಿ ವೇಣುಗೋಪಾಲ್ ಮತ್ತು ಸ್ಥಳೀಯ ಕಾಂಗ್ರೆಸ್ ಮುಖಂಡರೂ ಜೊತೆಯಾಗಿದ್ದರು.
ರೋಡ್ ಶೋ ವೇಳೆ ಅಭಿಮಾನಿಗಳು ರಾಹುಲ್ ಗೆ ಪುಷ್ಪ ಮಳೆ ಸುರಿಸಿ, ಅವರ ಫೋಟೋ ಹಿಡಿದು ರಸ್ತೆಯ ಇಕ್ಕೆಲಗಳಲ್ಲೂ ನಿಂತು ಸ್ವಾಗತ ಕೋರಿದರು. ಜನರ ಸ್ವಾಗತ ನೋಡಿ ರಾಹುಲ್ ಗಾಂಧಿ ಕೂಡಾ ಉಬ್ಬಿಹೋಗಿದ್ದರು. ಬಳಿಕ ಜನರನ್ನುದ್ದೇಶಿಸಿ ಮಾತನಾಡಿದರು.
ಈ ವೇಳೆ ಮಾತನಾಡಿದ ಅವರು ಇಷ್ಟು ದಿನ ನೀವು ನನ್ನನ್ನು ನಿಮ್ಮ ಮನೆ ಮಗನಂತೆ ನೋಡಿಕೊಂಡಿದ್ದೀರಿ. ನಿಮ್ಮೆಲ್ಲರ ಪ್ರೀತಿಗೆ ಅಭಾರಿಯಾಗಿದ್ದೇನೆ. ಈ ಬಾರಿ ಕೇಂದ್ರ ಮತ್ತು ರಾಜ್ಯದಲ್ಲಿ ನಮ್ಮದೇ ಸರ್ಕಾರ ಬಂದರೆ ನಿಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬಹುದು ಎಂದರು.