ನವದೆಹಲಿ : ದೇಶದಲ್ಲಿ ಲಾಕ್ ಡೌನ್ ಮಾಡುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಲಹೆ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ ಅವರು, ಕೊವಿಡ್ ವಿರುದ್ಧ ಹೋರಾಡಲು ಲಾಕ್ ಡೌನ್ ಒಂದೇ ಅಸ್ತ್ರ. ನ್ಯಾಯ್ ಯೋಜನೆ ಜಾರಿ ಜತೆ ಲಾಕ್ ಡೌನ್ ಜಾರಿ ಮಾಡಿ. ಸರ್ಕಾರದ ನಿಷ್ಕ್ರಿಯತೆಯಿಂದ ಅಮಾಯಕರು ಸಾಯುತ್ತಿದ್ದಾರೆ. ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ದೇಶಾದ್ಯಂತ ಕೊರೊನಾ 2ನೇ ಅಲೆ ಅಬ್ಬರ ಜೋರಾಗಿದ್ದು, ಅನೇಕ ಜನರು ಕೊರೊನಾಕ್ಕೆ ಬಲಿಯಾದರೂ ಇನ್ನು ಹಲವರು ಸೋಂಕಿನಿಂದ ನರಳುತ್ತಿದ್ದಾರೆ. ಇತ್ತ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ, ಬೆಡ್ ಗಳ ಕೊರತೆ ಕಾಡುತ್ತಿದೆ. ಈ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಸರ್ಕಾರಕ್ಕೆ ಈ ಸಲಹೆಯನ್ನು ನೀಡಿದ್ದಾರೆ.