Publish Date: Tue, 01 May 2018 (08:18 IST)
Updated Date: Tue, 01 May 2018 (08:19 IST)
ನವದೆಹಲಿ: ದೇಶದ ಎಲ್ಲಾ ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ ಎಂಬ ಪ್ರಧಾನಿ ಮೋದಿ ಹೇಳಿಕೆ ಶುದ್ಧ ಸುಳ್ಳು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ಏಪ್ರಿಲ್ 28 ರಂದು ದೇಶದ ಪ್ರಗತಿಯಲ್ಲಿ ಐತಿಹಾಸಿಕ ದಿನ. ದೇಶದ ಎಲ್ಲಾ ಗ್ರಾಮಗಳಿಗೂ ವಿದ್ಯುತ್ ಸೌಲಭ್ಯ ಒದಗಿಸಲಾಗಿದೆ ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.
ಇದಕ್ಕೆ ಪ್ರತಿಯಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ‘ಇದು ಮತ್ತೊಂದು ಸುಳ್ಳು’ ಎಂದು ಲೇವಡಿ ಮಾಡಿದ್ದಾರೆ. ಕಾಂಗ್ರೆಸ್ ವಕ್ತಾರ ರಣ್ ದೀಪ್ ಕೂಡಾ ಮೊನ್ನೆಯಷ್ಟೇ ಕಾಂಗ್ರೆಸ್ ಮಾಡಿದ್ದನ್ನು ಬಿಜೆಪಿ ತಾನು ಮಾಡಿದ್ದು ಎಂದು ಕ್ರೆಡಿಟ್ ಪಡೆಯುತ್ತಿದೆ ಎಂದಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.