Select Your Language

Notifications

webdunia
webdunia
webdunia
webdunia

ದೇಶದ ಯುವಕರನ್ನು ಕ್ಷಮೆ ಕೇಳಬೇಕು : ರಾಹುಲ್ ಗಾಂಧಿ

ದೇಶದ ಯುವಕರನ್ನು ಕ್ಷಮೆ ಕೇಳಬೇಕು : ರಾಹುಲ್ ಗಾಂಧಿ
ನವದೆಹಲಿ , ಶನಿವಾರ, 18 ಜೂನ್ 2022 (12:05 IST)
ನವೆದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಕೇಂದ್ರದ ಅಗ್ನಿಪಥ್ ಯೋಜನೆ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ. ಉತ್ತರ ಮತ್ತು ದಕ್ಷಿಣ ರಾಜ್ಯಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗುತ್ತಿದೆ.

ಈ ನಡುವೆ ಹೊಸ ಸೇನಾ ನೇಮಕಾತಿಯ ನೀತಿಯನ್ನು ಯುವಕರು ತಿರಸ್ಕರಿಸುತ್ತಿರುವ ಬಗ್ಗೆ ಟ್ವಿಟ್ಟರ್ನಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.

 
ಸತತ 8 ವರ್ಷಗಳಿಂದ ಬಿಜೆಪಿ ಸರ್ಕಾರ ಜೈ ಜವಾನ್, ಜೈ ಕಿಸಾನ್ ಮೌಲ್ಯಗಳಿಗೆ ಅಪಮಾನ ಮಾಡಿದೆ. ಮೂರು ಕೃಷಿ ಕಾಯ್ದೆಗಳನ್ನು ಪ್ರಧಾನಿ ಹಿಂಪಡೆಯಬೇಕು ಎಂದು ಈ ಹಿಂದೆ ಹೇಳಿದ್ದೆ. ಈಗಲೂ ಪ್ರಧಾನಿ ನರೇಂದ್ರ ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು. ಅಗ್ನಿಪಥ್ ಯೋಜನೆಯನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ?