Select Your Language

Notifications

webdunia
webdunia
webdunia
webdunia

ಗಾಝಾದಲ್ಲಿರುವ ಮುಸ್ಲಿಮರಿಗೆ ಮಿಡಿಯುತ್ತೀರಿ, ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ಹಿಂಸಾಚಾರದ ಬಗ್ಗೆ ರಾಹುಲ್ ಗಾಂಧಿ ಮೌನ

Rahul Gandhi

Krishnaveni K

ನವದೆಹಲಿ , ಶನಿವಾರ, 10 ಆಗಸ್ಟ್ 2024 (12:00 IST)
ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾಚಾರದ ಬಳಿಕ ಮೊಹಮ್ಮದ್ ಯೂನಸ್ ನೇತೃತ್ವದಲ್ಲಿ ಮಧ್ಯಂತರ ಸರ್ಕಾರ ಜಾರಿಗೆ ಬಂದ ಬೆನ್ನಲ್ಲೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿರುವ ಟ್ವೀಟ್ ಒಂದು ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಬಾಂಗ್ಲಾದೇಶದಲ್ಲಿ ನೂತನ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೇ ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ, ‘ಬಾಂಗ್ಲಾದೇಶದ ನೂತನ ಸರ್ಕಾರದ ಮುಖ್ಯಸ್ಥರಾಗಿ ನೇಮಕವಾಗಿರುವುದಕ್ಕೆ ಪ್ರೊಫೆಸರ್ ಮೊಹಮ್ಮದ್ ಯೂನಸ್ ಅವರಿಗೆ ಅಭಿನಂದನೆಗಳು. ಶೀಘ್ರವೇ ದೇಶದಲ್ಲಿ ಶಾಂತಿ ಕಾಪಾಡಲು ಕಾರ್ಯಪ್ರವೃತ್ತರಾಗಬೇಕಿದೆ’ ಎಂದಷ್ಟೇ ಬರೆದುಕೊಂಡಿದ್ದಾರೆ.

ಅವರ ಟ್ವೀಟ್ ನಲ್ಲಿ ಎಲ್ಲೂ ಬಾಂಗ್ಲಾದೇಶ ಹಿಂಸಾಚಾರದಲ್ಲಿ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ನಡೆದ ದಾಳಿಯ ಉಲ್ಲೇಖವೇ ಇಲ್ಲ. ಇದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿಂದೆ ಗಾಝಾದಲ್ಲಿ ಮುಸ್ಲಿಮರ ಮೇಲೆ ದಾಳಿಯಾದಾಗ ರಾಹುಲ್ ಅಲ್ಪಸಂಖ್ಯಾತರ ಮೇಲಿನ ದಾಳಿ ನಿಲ್ಲಬೇಕು ಎಂದು ಆಗ್ರಹಿಸಿದ್ದರು. ಆದರೆ ಈಗ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ದಾಳಿಯಾಗಿದ್ದಕ್ಕೆ ಹಿಂದೂ ಎಂಬ ಶಬ್ಧ ಬಿಡಿ, ಅಲ್ಪಸಂಖ್ಯಾತರು ಎಂದೂ ಉಲ್ಲೇಖಿಸದೇ ಮೌನವಾಗಿದ್ದಾರೆ ಎಂದು ಟೀಕೆ ಮಾಡಿದ್ದಾರೆ.

ಪ್ರಧಾನಿ ಮೋದಿ ತಮ್ಮ ಟ್ವೀಟ್ ನಲ್ಲಿ ಹಿಂದೂಗಳ ಮೇಲಿನ ದಾಳಿ ನಿಲ್ಲಬೇಕು ಎಂದು ಆಗ್ರಹಿಸಿದ್ದರು. ಆದರೆ ರಾಹುಲ್ ಗಾಂಧಿ ಟ್ವೀಟ್ ನಲ್ಲಿ ಹಿಂದೂಗಳ ಶಬ್ಧವೂ ಇಲ್ಲ. ಚುನಾವಣೆ ಬಂದಾಗ ಮಾತ್ರ ಹಿಂದೂಗಳ ನೆನಪಾಗುತ್ತದೆ. ಇವರು ನಿಜವಾಗಿಯೂ ಹಿಂದೂಗಳ ಪರವಾಗಿ ಇಲ್ಲ ಎಂಬುದಕ್ಕೆ ಇದೇ ಸಾಕ್ಷಿ ಎಂದು ಕೆಲವು ಬಳಕೆದಾರರು ಟೀಕಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮಂಗಳೂರು, ಬೆಂಗಳೂರು ನಡುವೆ ಮತ್ತೆ ರೈಲು ಸಂಚಾರ ಸ್ಥಗಿತ