Publish Date: Wed, 08 Aug 2018 (12:16 IST)
Updated Date: Wed, 08 Aug 2018 (12:17 IST)
ನವದೆಹಲಿ: ಪ್ರಧಾನಿ ಮೋದಿ ಆಡಳಿತದಲ್ಲಿ ಮಹಿಳೆಯರ ಮೇಲೆ ಆಗುತ್ತಿರುವ ದೌರ್ಜನ್ಯದ ಪ್ರಮಾಣ ಕಳೆದ 3000 ವರ್ಷಗಳಲ್ಲೇ ನಡೆದಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಅಪ್ರಾಪ್ತ ವಯಸ್ಸಿನ ಹೆಣ್ಣು ಮಕ್ಕಳ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳನ್ನು ಉಲ್ಲೇಖಿಸಿದ ರಾಹುಲ್ ಗಾಂಧಿ ಈ ಘಟನೆಗಳ ಬಗ್ಗೆ ಮೌನ ವಹಿಸಿರುವ ಪ್ರಧಾನಿ ಮೋದಿ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.
ಬಿಜೆಪಿಯ ಬೇಟಿ ಬಚಾವೋ ಬೇಟಿ ಪಡಾವೋ ಎನ್ನುವುದು ಬಿಜೆಪಿ ಶಾಸಕರಿಂದ ಹೆಣ್ಣು ಮಕ್ಕಳನ್ನು ಬಚಾವ್ ಮಾಡಿ ಎಂಬಂತಾಗಿದೆ ಎಂದು ರಾಹುಲ್ ಲೇವಡಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.