ನವದೆಹಲಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಿಪಕ್ಷಗಳು ಮುಗಿಬಿದ್ದಿವೆ.
ಇದೇ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಹ ಟ್ವೀಟ್ ಮಾಡಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿಯ 40 ಪರ್ಸೆಂಟ್ ಕಮಿಷನ್ ಸರ್ಕಾರ ತಮ್ಮದೇ ಕಾರ್ಯಕರ್ತನನ್ನು ಬಲಿ ಪಡೆದಿದೆ. ಸಂತ್ರಸ್ತ ಪ್ರಧಾನಿಗೆ ಸಲ್ಲಿಸಿದ ಮನವಿಗೆ ಉತ್ತರ ಸಿಕ್ಕಿಲ್ಲ.
ಈ ಪ್ರಕರಣಕ್ಕೆ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿ ಇಬ್ಬರೂ ಪಾಲುದಾರರು. ಇದು “ಬಿಜೆಪಿ ಕರಪ್ಷನ್ ಫೈಲ್ಸ್” ಎಂದು ಟ್ವೀಟ್ ಮಾಡಿ ರಾಹುಲ್ ಗಾಂಧಿ ಆಕ್ರೋಶ ಹೊರಹಾಕಿದ್ದಾರೆ.