Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಅಧ್ಯಕ್ಷ ಸ್ಥಾನ : ಮೇ ತಿಂಗಳಲ್ಲಿ ರಾಹುಲ್ ಗಾಂಧಿಗೆ ಪಟ್ಟಾಭೀಷೇಕ

ಕಾಂಗ್ರೆಸ್ ಅಧ್ಯಕ್ಷ ಸ್ಥಾನ : ಮೇ ತಿಂಗಳಲ್ಲಿ ರಾಹುಲ್ ಗಾಂಧಿಗೆ ಪಟ್ಟಾಭೀಷೇಕ
ನವದೆಹಲಿ , ಸೋಮವಾರ, 30 ಮಾರ್ಚ್ 2015 (13:37 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಮುಂಬರುವ ಮೇ ತಿಂಗಳಲ್ಲಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ಮೇ ತಿಂಗಳಲ್ಲಿ ಎಐಸಿಸಿ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ರಾಹುಲ್ ಗಾಂಧಿಯವರಿಗೆ ಪಟ್ಟಾಭೀಷೇಕ ನಡೆಸುವ ಸಾಧ್ಯತೆಗಳಿವೆ ಎನ್ನಲಾಗಿದೆ. ಸಭೆಯನ್ನು ದೆಹಲಿ ಅಥವಾ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶ ಅಥವಾ ಉತ್ತರಾಖಂಡ್‌ನಲ್ಲಿ ನಡೆಸಲಾಗುವುದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ತಿಳಿಸಿದ್ದಾರೆ.

ಕಳೆದ ಒಂದು ತಿಂಗಳಿನಿಂದ ವಿದೇಶ ಪ್ರವಾಸದಲ್ಲಿರುವ ರಾಹುಲ್ ಗಾಂಧಿ, ಮುಂದಿನ ತಿಂಗಳು ದೇಶಕ್ಕೆ ವಾಪಸಾಗುವ ನಿರೀಕ್ಷೆಗಳಿದ್ದು, ಮೇ ತಿಂಗಳಲ್ಲಿ ರಾಹುಲ್‌ ಕಾಂಗ್ರೆಸ್ ಅಧ್ಯಕ್ಷರ ಪಟ್ಟ ಅಲಂಕರಿಸಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.

ಒಂದು ವೇಳೆ ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದಲ್ಲಿ ಸೋನಿಯಾ ಗಾಂದಿ ಕಾಂಗ್ರೆಸ್ ಸಂಸದೀಯ ಮಂಡಳಿಯ ಮುಖ್ಯಸ್ಥರಾಗಿ ಮುಂದುವರಿಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

Share this Story:

Follow Webdunia kannada