Select Your Language

Notifications

webdunia
webdunia
webdunia
webdunia

ಕೇರಳ ಬಿಟ್ಟು ಕರ್ನಾಟಕದಲ್ಲಿ ರಾಹುಲ್ ಗಾಂಧಿ ಸ್ಪರ್ಧೆ

Rahul Gandhi

Krishnaveni K

ನವದೆಹಲಿ , ಮಂಗಳವಾರ, 27 ಫೆಬ್ರವರಿ 2024 (11:07 IST)
Photo Courtesy: Twitter
ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇರಳ ಬಿಟ್ಟು ಕರ್ನಾಟಕದಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.

ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಅಮೇಠಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿದ್ದರು. ಅಮೇಠಿಯಲ್ಲಿ ಸ್ಮೃತಿ ಇರಾನಿ ವಿರುದ್ಧ ಸೋತಿದ್ದರು. ಆದರೆ ವಯನಾಡಿನಲ್ಲಿ ಗೆದ್ದಿದ್ದರು. ಹೀಗಾಗಿ ಇಷ್ಟು ಸಮಯ ವಯನಾಡಿನ ಸಂಸದರಾಗಿದ್ದರು. ಆದರೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ ವಯನಾಡು ಬಿಟ್ಟು ಬೇರೆ ಕ್ಷೇತ್ರದಲ್ಲಿ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ.

ಸದ್ಯಕ್ಕೆ ರಾಹುಲ್ ಗಾಂಧಿ ಕಣ್ಣು ದಕ್ಷಿಣ ಭಾರತದ ರಾಜ್ಯಗಳ ಮೇಲೆಯೇ ಇದೆ. ಸದ್ಯಕ್ಕೆ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಕಾಂಗ್ರೆಸ್ ಆಡಳಿತವಿದೆ. ಹೀಗಾಗಿ ಈ ಎರಡು ರಾಜ್ಯಗಳ ಪೈಕಿ ಒಂದು ರಾಜ್ಯದಿಂದ ಸ್ಪರ್ಧಿಸುವ ಇರಾದೆ ಹೊಂದಿದ್ದಾರೆ. ಅದರಲ್ಲೂ ಕರ್ನಾಟಕದಲ್ಲಿ ಸ್ಪರ್ಧಿಸುವ ಸಾಧ‍್ಯತೆ ಹೆಚ್ಚಾಗಿದೆ.

ರಾಹುಲ್ ಗಾಂಧಿ ಎಂದಿನಂತೆ ಎರಡು ಕಡೆ ಸ್ಪರ್ಧಿಸಲಿದ್ದಾರೆ. ಉತ್ತರ ಪ್ರದೇಶದ ಒಂದು ಸ್ಥಾನ ಮತ್ತು ಕರ್ನಾಟಕ ಅಥವಾ ತೆಲಂಗಾಣದಿಂದ ಸ್ಪರ್ಧಿಸುವ ಸಾಧ‍್ಯತೆ ಬಹುತೇಕ ನಿಚ್ಚಳವಾಗಿದೆ. ಕೇರಳದ ವಯನಾಡಿನಲ್ಲಿ ಕಳೆದ ಬಾರಿ ಭರ್ಜರಿ ಅಂತರದ ಗೆಲುವು ಸಾಧಿಸಿದ್ದರೂ ಈ ಬಾರಿ ವಯನಾಡಿನಿಂದ ಹೊರಬರುವ ನಿರ್ಧಾರ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನಮ್ಮ ನದಿ, ನಮ್ಮ ಹಕ್ಕು: ಇನ್ಮುಂದೆ ಪಾಕಿಸ್ತಾನಕ್ಕೆ ಹೋಗಲ್ಲ ನಮ್ಮ ರಾವಿ ನದಿ ನೀರು