Publish Date: Wed, 03 Apr 2024 (10:30 IST)
Updated Date: Wed, 03 Apr 2024 (10:40 IST)
ವಯನಾಡು: ಮುಂಬರುವ ಲೋಕಸಭೆ ಚುನಾವಣೆಗೆ ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಯನಾಡಿನಲ್ಲಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.
ಕಳೆದ ಬಾರಿಯೂ ರಾಹುಲ್ ಗಾಂಧಿ ಇಲ್ಲಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಮತ್ತೊಮ್ಮೆ ಕೇರಳದಿಂದ ಸ್ಪರ್ಧಿಸುತ್ತಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮೊದಲು ವಯನಾಡಿನಲ್ಲಿ ರಾಹುಲ್ ಗಾಂಧಿ ರೋಡ್ ಶೋ ನಡೆಸಲಿದ್ದಾರೆ. ಸಂಜೆ ಅವರು ದೆಹಲಿಗೆ ವಾಪಸ್ ಆಗಲಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ವಯನಾಡಿನಲ್ಲಿ ಸಿಪಿಐ ಪಕ್ಷದಿಂದ ಅನ್ನಿ ರಾಜಾ ಮತ್ತು ಬಿಜೆಪಿಯಿಂದ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಬಿಜೆಪಿ ರಾಜ್ಯಾಧ್ಯಕ್ಷರೇ ಸ್ಪರ್ಧಿಸುತ್ತಿರುವುದರಿಂದ ವಯನಾಡಿನಲ್ಲಿ ರಾಹುಲ್ ಗಾಂಧಿಗೆ ತೀವ್ರ ಪೈಪೋಟಿ ಎದುರಾಗಲಿದೆ.
ಕಳೆದ ಬಾರಿ ರಾಹುಲ್ ಗಾಂಧಿ ವಯನಾಡಿನಲ್ಲಿ 4.31 ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಕಳೆದ ಬಾರಿ ಅಮೇಠಿಯಲ್ಲೂ ಸ್ಪರ್ಧಿಸಿದ್ದ ರಾಹುಲ್ ಹಾಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿರುದ್ಧ ಸೋಲು ಅನುಭವಿಸಿದ್ದರು.