ಇಂದು ಮತ್ತೆ ಇಡಿ ಮುಂದೆ ರಾಹುಲ್ ಗಾಂಧಿ ವಿಚಾರಣೆ

Webdunia
ಸೋಮವಾರ, 20 ಜೂನ್ 2022 (10:24 IST)
ನವದೆಹಲಿ : ನ್ಯಾಷನಲ್ ಹೆರಾಲ್ಡ್ ಸಂಕಷ್ಟದಲ್ಲಿ ಸಿಲುಕಿರುವ ಎಐಸಿಸಿ ಮಾಜಿ ಅಧ್ಯಕ್ಷ ಸಂಸದ ರಾಹುಲ್ ಗಾಂಧಿ ಸೋಮವಾರ ಇಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.

ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ಇಡಿ ಕಚೇರಿಯಲ್ಲಿ ಬೆಳಗ್ಗೆ 11 ಗಂಟೆಯಿಂದ ವಿಚಾರಣೆ ಆರಂಭವಾಗಲಿದೆ. ಕಳೆದ ವಾರ ಸೋಮವಾರದಿಂದ ಮೂರು ದಿನಗಳ ನಿರಂತರ ವಿಚಾರಣೆ ಎದುರಿಸಿದ್ದ ರಾಹುಲ್ ಗಾಂದಿ, 30 ಗಂಟೆಗಳ ವಿಚಾರಣೆಯಲ್ಲಿ ಸುಮಾರು 16 ಪ್ರಶ್ನೆಗಳಿಗೆ 70 ಪುಟಗಳ ಹೇಳಿಕೆ ದಾಖಲು ಮಾಡಿದ್ದರು.

ಮೂರು ದಿನಗಳ ವಿಚಾರಣೆ ಬಳಿಕ ಇಡಿ ಕಳೆದ ಗುರುವಾರ ವಿಚಾರಣೆಯಿಂದ ವಿನಾಯಿತಿ ನೀಡಿ ಶುಕ್ರವಾರ ವಿಚಾರಣೆಗೆ ಹಾಜರಾಗಲು ಸೂಚಿಸಿತ್ತು. ಆದರೆ ತಾಯಿ ಸೋನಿಯಾಗಾಂಧಿಗೆ ಅನಾರೋಗ್ಯ ಮತ್ತು ಜನ್ಮ ದಿನದ ಹಿನ್ನಲೆ ಸೋಮವಾರದವರೆಗೂ ವಿಚಾರಣೆಗೆ ಹಾಜರಾಗಲು ಸಾಧ್ಯವಾಗುವುದಿಲ್ಲ ಎಂದು ರಾಹುಲ್ ಗಾಂಧಿ ತಿಳಿಸಿದ್ದರು. 

ಈ ಹಿನ್ನೆಲೆ ನಾಳೆ ನಾಲ್ಕನೇ ದಿನದ ವಿಚಾರಣೆ ರಾಹುಲ್ ಗಾಂಧಿ ವಿಚಾರಣೆ ಹಾಜರಾಗಲಿದ್ದಾರೆ. ಈ ನಡುವೆ ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಲು ಸನ್ನದ್ಧವಾಗಿದೆ.

ಕಳೆದ ವಾರವೂ ಉಗ್ರ ಹೋರಾಟ ಮಾಡಿದ್ದ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಲು ಸಿದ್ಧವಾಗಿದ್ದಾರೆ. ಕಾಂಗ್ರೆಸ್ ಪ್ರತಿಭಟನೆ ಹಿನ್ನೆಲೆ ಎಐಸಿಸಿ ಮತ್ತು ಇಡಿ ಕಚೇರಿಯ ಸುತ್ತ 144 ಸೆಕ್ಷನ್ ಜಾರಿ ಮಾಡಿದ್ದು ಬಿಗಿ ಭದ್ರತೆ ನಿಯೋಜನೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಕುರ್ಚಿ ಗುದ್ದಾಟಕ್ಕೆ ಬ್ರೇಕ್ ಬೆನ್ನಲ್ಲೇ ಡಿಕೆ ಸಂಪುಟದಲ್ಲಿ ಮಂತ್ರಿಯಾಗಲ್ಲ ಎಂದ ರಾಜಣ್ಣ

ನಮ್ಮ ಪಕ್ಷಕ್ಕೆ ದುಡ್ಡು ಕೊಡದೇ ಇನ್ಯಾರಿಗೆ ಕೊಡೋಣ: ಡಿ.ಕೆ. ಶಿವಕುಮಾರ್ ಪ್ರಶ್ನೆ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments