Select Your Language

Notifications

webdunia
webdunia
webdunia
webdunia

ಓರಿಸ್ಸಾ: ರೈತರನ್ನು ಉಳಿಸಿ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ನಾಯಕತ್ವ

ಓರಿಸ್ಸಾ: ರೈತರನ್ನು ಉಳಿಸಿ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ನಾಯಕತ್ವ
ಭುವನೇಶ್ವರ್ , ಮಂಗಳವಾರ, 1 ಸೆಪ್ಟಂಬರ್ 2015 (19:31 IST)
ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಓರಿಸ್ಸಾ ರಾಜ್ಯಕ್ಕೆ ಎರಡು ದಿನಗಳ ಭೇಟಿ ನೀಡಲಿದ್ದು, ರೈತರನ್ನು ಉಳಿಸಿ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ. 
 
ಓರಿಸ್ಸಾದ ಬಾರಗಢ್‌ ಜಿಲ್ಲೆಯಲ್ಲಿ ಆಯೋಜಿಸಲಾದ ರೈತರನ್ನು ಉಳಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕೇಂದ್ರ ಸರಕಾರ ಮತ್ತು ಬಿಜೆಡಿ ಸರಕಾರದ ವೈಫಲ್ಯಗಳ ಬಗ್ಗೆ ವಾಗ್ದಾಳಿ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ರಾಹುಲ್ ಗಾಂಧಿ ಸೆಪ್ಟೆಂಬರ್ 10 ರಂದು ಬಾರಗಢ್ ಜಿಲ್ಲೆಗೆ ಭೇಟಿ ನೀಡಿ ರೈತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಓರಿಸ್ಸಾ ಪ್ರದೇಶ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಪ್ರಸಾದ್ ಹರಿಚಂದನ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
 
ಪಶ್ಚಿಮ ಓರಿಸ್ಸಾದ ಭಾಗಗಳಲ್ಲಿ ಬರಗಾಲದ ಪರಿಸ್ಥಿತಿಯಿದ್ದು ಬೆಳೆನಾಶದಿಂದಾಗಿ ರೈತರು ಆತ್ಮಹತ್ಯೆಗೆ ಶರಣಾಗುತ್ತಿರುವುದರಿಂದ ರೈತರಿಗೆ ಉತ್ತೇಜನ ನೀಡಲು ರೈತರನ್ನು ಉಳಿಸಿ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಹರಿಚಂದನ್ ಹೇಳಿದ್ದಾರೆ. 
 
ರಾಜ್ಯದ ರೈತರ ಸಂಕಷ್ಟಕ್ಕೆ ರಾಜ್ಯದಲ್ಲಿರುವ ಬಿಜೆಡಿ ಸರಕಾರ ಮತ್ತು ಕೇಂದ್ರದಲ್ಲಿರುವ ಮೋದಿ ನೇತೃತ್ವದ ಎನ್‌ಡಿಎ ಸರಕಾರ ನೇರ ಹೊಣೆಯಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. 
 
ರಾಜ್ಯದಲ್ಲಿನ ಬರಗಾಲದ ಪರಿಸ್ಥಿತಿಯನ್ನು ನಿಭಾಯಿಸಲು ನವೀನ್ ಪಟ್ನಾಯಕ್ ನೇತೃತ್ವದ ಸರಕಾರ ವಿಫಲವಾಗಿದೆ ಎಂದು ಕಾಂಗ್ರೆಸ್ ಘಟಕದ ಅಧ್ಯಕ್ಷ ಹರಿಚಂದನ್ ಆರೋಪಿಸಿದ್ದಾರೆ. 

Share this Story:

Follow Webdunia kannada