Publish Date: Wed, 09 Aug 2023 (07:59 IST)
Updated Date: Wed, 09 Aug 2023 (07:32 IST)
ನವದೆಹಲಿ : ಅನರ್ಹತೆ ಆದೇಶ ವಾಪಸ್ ಪಡೆದ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ವಯನಾಡ್ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಆಗಸ್ಟ್ 12 ಮತ್ತು 13 ರಂದು ರಾಹುಲ್ ಗಾಂಧಿ ತಮ್ಮ ಸಂಸತ್ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ ಎಂದು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ.
ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರ ಅನರ್ಹತೆಯನ್ನು ಹಿಂಪಡೆಯಲಾದ ಬಳಿಕ ಮೊದಲ ಬಾರಿಗೆ ಅವರು ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದು, ಅವರನ್ನು ಅದ್ದೂರಿಯಾಗಿ ಸ್ವಾಗತಿಸಲು ಎಲ್ಲ ತಯಾರಿ ಮಾಡಿಕೊಳ್ಳಲಾಗುತ್ತಿದೆ.