Daily Horoscope

Select Your Language

Notifications

webdunia
webdunia
webdunia
webdunia

ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ವೇಳೆ ರಾಹುಲ್ ಗಾಂಧಿ ವಿಡಿಯೋವೊಂದು ವೈರಲ್

Rahul Gandhi
Photo Credit: X
ನವದೆಹಲಿ: ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದ್ದರೆ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಡಿಯೋವೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಕೇರಳ, ತಮಿಳುನಾಡು, ಅಸ್ಸಾಂ, ಪಶ್ಚಿಮ ಬಂಗಾಲ ಮತ್ತು ಪುದುಚೇರಿ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಸದ್ಯಕ್ಕೆ ಕೇರಳದಲ್ಲಿ ಮಾತ್ರ ಕಾಂಗ್ರೆಸ್ ಅಧಿಕಾರ ಪಡೆಯುವತ್ತ ಹೆಜ್ಜೆಯಿಟ್ಟಿದೆ.

ತಮಿಳುನಾಡಿನಲ್ಲಿ ಕಾಂಗ್ರೆಸ್ ಮಿತ್ರ ಪಕ್ಷ ಡಿಎಂಕೆ ಅಧಿಕಾರಕ್ಕೇರುವ ವಿಶ್ವಾಸವಿತ್ತಾದರೂ ಇಲ್ಲಿ ಟಿವಿಕೆ ವಿಜಯ್ ಪಕ್ಷ ಡಿಎಂಕೆಗೆ ಠಕ್ಕರ್ ಕೊಟ್ಟಿದೆ. ಇನ್ನು ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆಯಲ್ಲಿದೆ.

ಇದರ ನಡುವೆ ಸೋಷಿಯಲ್ ಮೀಡಿಯಾದಲ್ಲಿ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಹೊಸ್ತಿಲಲ್ಲಿ ರಾಹುಲ್ ಮಸ್ಕತ್ ನಲ್ಲಿದ್ದಾರೆ ಎಂದು ಹೇಳಲಾಗುತ್ತಿರುವ ವಿಡಿಯೋವೊಂದು ವೈರಲ್ ಆಗಿದೆ. ಆ ವಿಡಿಯೋ ಇಲ್ಲಿದೆ ನೋಡಿ.

pic.twitter.com/pO3EKWBSFY

 

— Gambler (@balak__desi) May 3, 2026

Share this Story:

Follow Webdunia kannada

ಮುಂದಿನ ಸುದ್ದಿ

Tamil Nadu election result: ತಮಿಳುನಾಡಿನಲ್ಲಿ ಮೊದಲ ಪ್ರಯತ್ನದಲ್ಲೇ ದಳಪತಿ ವಿಜಯ್ ಗೆ ಬಂಪರ್