Select Your Language

Notifications

webdunia
webdunia
webdunia
webdunia

ಏಮ್ಸ್ ಆಸ್ಪತ್ರೆಯಲ್ಲಿ ಸುಷ್ಮಾ ಸ್ವರಾಜ್ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ

ಏಮ್ಸ್ ಆಸ್ಪತ್ರೆಯಲ್ಲಿ ಸುಷ್ಮಾ ಸ್ವರಾಜ್ ಆರೋಗ್ಯ ವಿಚಾರಿಸಿದ ರಾಹುಲ್ ಗಾಂಧಿ
ನವದೆಹಲಿ , ಶುಕ್ರವಾರ, 29 ಏಪ್ರಿಲ್ 2016 (15:34 IST)
ಅನಾರೋಗ್ಯದಿಂದ ಬಳಲುತ್ತಿರುವ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
 
ಏಮ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ಕೇಂದ್ರ ಸಚಿವೆ ಸುಷ್ಮಾ ಆರೋಗ್ಯದಲ್ಲಿ ವೇಗವಾಗಿ ಚೇತರಿಕೆಯಾಗುತ್ತಿದ್ದು, ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಇಂದು ರಾಹುಲ್ ಗಾಂಧಿ, ಸುಷ್ಮಾ ಅವರನ್ನು ಭೇಟಿಯಾಗಿದ್ದಾರೆ.
 
ಕಳೆದ ಏಪ್ರಿಲ್ 25 ರಂದು ಎದೆನೋವಿನಿಂದಾಗಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 64 ವರ್ಷ ವಯಸ್ಸಿನ ಸುಷ್ಮಾ ಸ್ವರಾಜ್, ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಹಿರಿಯ ವೈದ್ಯರು ಸುಷ್ಮಾ ಸ್ವರಾಜ್‌ಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದರಿಂದ ಶೀಘ್ರದಲ್ಲಿಯೇ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದು ಏಮ್ಸ್ ವೈದ್ಯರು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.   

Share this Story:

Follow Webdunia kannada

ಮುಂದಿನ ಸುದ್ದಿ

ಅಸ್ಸಿ ಘಾಟ್‌ನಲ್ಲಿ ಸೌರಚಾಲಿತ ದೋಣಿಗೆ ಚಾಲನೆ ನೀಡಲಿರುವ ಪ್ರಧಾನಿ