Publish Date: Sun, 05 Nov 2017 (11:23 IST)
Updated Date: Sun, 05 Nov 2017 (11:35 IST)
ನವದೆಹಲಿ: ಬೆಲೆ ಏರಿಕೆ ನಿಯಂತ್ರಿಸಿ. ಇಲ್ಲದಿದ್ದರೆ ಅಧಿಕಾರ ಬಿಡಿ.. ಹೀಗಂತ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡಿದ್ದಾರೆ.
ಹಣದುಬ್ಬರ ಮತ್ತು ಬೆಲೆಯೇರಿಕೆ ನಿಯಂತ್ರಿಸಲು ಸಾಧ್ಯವಿಲ್ಲದಿದ್ದರೆ ಅಧಿಕಾರ ತ್ಯಾಗ ಮಾಡಿ ಎಂದು ಟ್ವೀಟರ್ ನಲ್ಲಿ ರಾಹುಲ್ ಗಾಂಧಿ ಕೇಂದ್ರ ನಾಯಕರಿಗೆ ಎಚ್ಚರಿಕೆ ನೀಡಿದ್ದಾರೆ.
ಅಡುಗೆ ಅನಿಲ ಬೆಲೆ ಏರಿಕೆ ಹಿನ್ನಲೆಯಲ್ಲಿ ರಾಹುಲ್ ಕೇಂದ್ರಕ್ಕೆ ಚಾಟಿ ಬೀಸಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ಚುನಾವಣೆ ಹಿನ್ನಲೆಯಲ್ಲಿ ರಾಹುಲ್ ಗಾಂಧಿ ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತಮ್ಮ ವಾಗ್ದಾಳಿ ಮುಂದುವರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ