Publish Date: Mon, 07 Aug 2023 (11:30 IST)
Updated Date: Mon, 07 Aug 2023 (11:58 IST)
ಸುಪ್ರೀಂ ಆದೇಶ ಬೆನ್ನಲ್ಲೇ ಸೋಮವಾರ ಲೋಕಸಭೆಯ ಸ್ಪೀಕರ್ ಸದಸ್ಯತ್ವವನ್ನ ಮರಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆ ಅಧಿವೇಶನಕ್ಕೆ ಹಾಜರಾಗಬಹುದಾಗಿದೆ.
ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ನ ಸೂರತ್ ಮ್ಯಾಜಿಸ್ಟ್ರೇಟ್ ಕೋರ್ಟ್ ವಿಧಿಸಿದ್ದ ಶಿಕ್ಷೆಗೆ ತಡೆ ನೀಡಲು ನಿರಾಕರಿಸಿದ್ದ ಗುಜರಾತ್ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು.
ಆದೇಶದ ವಿರುದ್ಧ ಜು.15 ರಂದು ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಬಿ.ಆರ್ ಗವಾಯಿ, ಪಿ.ಎಸ್ ನರಸಿಂಹ ಮತ್ತು ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠವು ಪ್ರಕರಣದ ವಿಚಾರಣೆ ನಡೆಸಿತು. ಈ ವೇಳೆ ಸೂರತ್ ನ್ಯಾಯಾಲಯದ ಆದೇಶಕ್ಕೆ ತಡೆ ನೀಡಿತ್ತು.