Publish Date: Fri, 11 Aug 2017 (09:08 IST)
Updated Date: Fri, 11 Aug 2017 (13:37 IST)
ನವದೆಹಲಿ: ಗುಜರಾತ್ ನಲ್ಲಿ ರಾಜ್ಯಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್ ನ ಅಹಮ್ಮದ್ ಪಟೇಲ್, ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡುತ್ತಾ, ತಮ್ಮ ನಾಯಕ ರಾಹುಲ್ ಗಾಂಧಿ ಮುಂದಿನ ಚುನಾವಣೆಯಲ್ಲಿ ಪ್ರಧಾನಿ ಮೋದಿಯನ್ನು ಸೋಲಿಸಲಿದ್ದಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಸೋಲಿಸುವ ಸಂಪೂರ್ಣ ತಾಕತ್ತು ರಾಹುಲ್ ಗಿದೆ ಎಂದು ಖಾಸಗಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿಕೊಂಡಿದ್ದಾರೆ.
ಗುಜರಾತ್ ನಲ್ಲಿ ನಾನು ಗೆಲ್ಲಬಹುದು ಎಂದು ರಾಹುಲ್ ಗಾಂಧಿಗೆ ಸಂಪೂರ್ಣ ವಿಶ್ವಾಸವಿತ್ತು. ನಾನು ಗೆದ್ದಾಗ ಮೊದಲು ರಾಹುಲ್ ಗಾಂಧಿಯವರೇ ನನಗೆ ಫೋನ್ ಮಾಡಿ ಶುಭ ಕೋರಿದ್ದರು. ಆಗ ನಾನು ಮುಂಬರುವ ವಿಧಾನಸಭೆಯಲ್ಲೂ ಕಾಂಗ್ರೆಸ್ ಗೆಲ್ಲಿಸುವುದಾಗಿ ಭರವಸೆ ನೀಡಿದ್ದೇನೆ ಎಂದು ಅಹಮ್ಮದ್ ಪಟೇಲ್ ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ