Select Your Language

Notifications

webdunia
webdunia
webdunia
webdunia

ಪ್ರಧಾನಿ ಮೋದಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ರಾಹುಲ್ ಗಾಂಧಿ

Prime Minister Narendra Modi Birthdya

Sampriya

ನವದೆಹಲಿ , ಮಂಗಳವಾರ, 17 ಸೆಪ್ಟಂಬರ್ 2024 (15:19 IST)
ನವದೆಹಲಿ: ಇಂದು 74ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಗಣ್ಯರು ಶುಭಾಶಯ ತಿಳಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ರಾಹುಲ್ ಗಾಂಧಿ ಅವರು ಮೋದಿಗೆ ಬರ್ತಡೇ ಶುಭಕೋರಿ ಪೋಸ್ಟ್ ಹಾಕಿದ್ದಾರೆ.

"ಜನ್ಮದಿನದ ಶುಭಾಶಯಗಳು ಪ್ರಧಾನ ಮಂತ್ರಿ ನರೇಂದ್ರ ಮೋದಿ ಜಿ. ಜೀವನಪೂರ್ತಿ ಆರೋಗ್ಯಕರವಾಗಿರಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.  

ಇನ್ನು ಹಲವು ವಿರೋಧ ಪಕ್ಷಗಳ ನಾಯಕರು ಪ್ರಧಾನಿ ಮೋದಿಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, "ಪ್ರಧಾನಿ ನರೇಂದ್ರ ಮೋದಿ ಜಿ ಅವರಿಗೆ ಅವರ ಜನ್ಮದಿನದ ಶುಭಾಶಯಗಳು. ನೂರಾರು ಕಾಲ ಆರೋಗ್ಯವಂತರಾಗಿರಿ ಎಂದು ಹಾರೈಸಿದ್ದಾರೆ.

ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು, "ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರಿಗೆ ಹೃತ್ಪೂರ್ವಕ ಜನ್ಮದಿನದ ಶುಭಾಶಯಗಳು. ನಾನು ನಿಮಗೆ ದೀರ್ಘ ಮತ್ತು ಆರೋಗ್ಯಕರ ಜೀವನವನ್ನು ಬಯಸುತ್ತೇನೆ" ಎಂದು ಪೋಸ್ಟ್ ಮಾಡಿದ್ದಾರೆ.

'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಮುಂಬರುವ ವರ್ಷಗಳಲ್ಲಿ ನೀವು ನಿರಂತರ ಆರೋಗ್ಯದೊಂದಿಗೆ ದೀರ್ಘಾಯುಷ್ಯವನ್ನು ಹಾರೈಸುತ್ತೇನೆ" ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ನೊಬ್ಬರ ಜೀವ ಉಳಿಸಲು ಹೋಗಿ ತನ್ನ ಪ್ರಾಣ ಕಳೆದುಕೊಂಡ ಅರ್ಚನಾ ಕಾಮತ್