Select Your Language

Notifications

webdunia
webdunia
webdunia
webdunia

ಜಯಲಲಿತಾ ಭೇಟಿಗೆ ಆಗಮಿಸಿದ ರಾಹುಲ್ ಗಾಂಧಿ

ಜಯಲಲಿತಾ ಭೇಟಿಗೆ ಆಗಮಿಸಿದ ರಾಹುಲ್ ಗಾಂಧಿ
ಚೆನ್ನೈ: , ಶುಕ್ರವಾರ, 7 ಅಕ್ಟೋಬರ್ 2016 (12:34 IST)
ಅನಾರೋಗ್ಯದಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಭೇಟಿ ಮಾಡಲು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ನಗರಕ್ಕೆ ಆಗಮಿಸಿದ್ದಾರೆ.
 
ನಗರದ ವಿಮಾನ ನಿಲ್ದಾಣದಿಂದ ನೇರವಾಗಿ ಅಪೋಲೋ ಆಸ್ಪತ್ರೆಗೆ ಭೇಟಿ ನೀಡಿದ ರಾಹುಲ್, ಜಯಲಲಿತಾ ಅವರ ಆರೋಗ್ಯವನ್ನು ವಿಚಾರಿಸಿದರು ಎಂದು ಮೂಲಗಳು ತಿಳಿಸಿವೆ.
 
ತಮಿಳುನಾಡು ಕಾಂಗ್ರೆಸ್ ಘಟಕದ ಅಧ್ಯಕ್ಷ ತಿರುವಕ್ಕರಸು ಮೊದಲು ಎಐಎಡಿಎಂಕೆ ಪಕ್ಷದಲ್ಲಿದ್ದಾಗ ಜಯಲಲಿತಾ ಅವರ ಬಲಗೈ ಬಂಟರಾಗಿದ್ದರು. ನಂತರ ಕೆಲ ಕಾರಣಗಳಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು.
 
ತಿರುವಕ್ಕರಸು ಅವರಿಗೆ ಜಯಲಲಿತಾ ಆಪ್ತರಾಗಿದ್ದರಿಂದ ರಾಹುಲ್ ಗಾಂಧಿಗೆ ಸಾಥ್ ನೀಡಿದ್ದಾರೆ. ಜಯಲಲಿತಾ ಅವರ ಆರೋಗ್ಯ ವಿಚಾರಿಸಿದ ನಂತರ ನೇರವಾಗಿ ದೆಹಲಿಗೆ ತೆರಳಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ  

Share this Story:

Follow Webdunia kannada

ಮುಂದಿನ ಸುದ್ದಿ

ದಯವಿಟ್ಟು ನೀರುಬಿಡಿ ಎಂದು ಹೇಳಬೇಡಿ ಸಾರ್: ಎಂ.ಬಿ.ಪಾಟೀಲ್