Select Your Language

Notifications

webdunia
webdunia
webdunia
webdunia

India Pakistan:ಕದನವಿರಾಮ ಘೋಷಿಸಿದ್ದು ಟ್ರಂಪ್: ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್ ಗಾಂಧಿ

Rahul Gandhi

Krishnaveni K

ನವದೆಹಲಿ , ಭಾನುವಾರ, 11 ಮೇ 2025 (16:29 IST)
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಕೊನೆಗೊಳಿಸಲು ಕದನವಿರಾಮ ಘೋಷಿಸಿದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಇದರ ಬಗ್ಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ್ ನಡೆಸಲಾಯಿತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ನಮ್ಮ ಮೇಲೆ ದಾಳಿ ಮಾಡಿತು. ಅದಕ್ಕೆ ಭಾರತೀಯ ಸೇನೆ ತಿರುಗೇಟು ನೀಡಿತು. ಆದರೆ ಕದನ ವಿರಾಮ ಘೋಷಿಸಿದ್ದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್. ಪ್ರಧಾನಿ ಮೋದಿಯವರೇ ಈ ಸಂಘರ್ಷಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಬೇಕು. ಇದು ನಮ್ಮ ಮುಂಬರುವ ಸವಾಲುಗಳನ್ನು ಎದುರಿಸಲು ನಮ್ಮ ಸಾಮೂಹಿಕ ಸಂಕಲ್ಪವನ್ನು ಪ್ರದರ್ಶಿಸಲು ಒಂದು ಅವಕಾಶವಾಗಿದೆ. ಹೀಗಾಗಿ ನಮ್ಮ ಮನವಿಯನ್ನು ಪರಿಗಣಿಸುತ್ತೀರಿ ಎಂದು ಭಾವಿಸುತ್ತೇನೆ ಎಂದು ರಾಹುಲ್ ಪತ್ರ ಬರೆದಿದ್ದಾರೆ.

ಇನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡಾ ಪ್ರಧಾನಿ ಮೋದಿಗೆ ಪತ್ರ ಬರೆದು ವಿಶೇಷ ಅಧಿವೇಶನ ಕರೆಯಲು ಮನವಿ ಮಾಡಿದ್ದಾರೆ.  ಕದನ ವಿರಾಮದ ಬಗ್ಗೆ ಚರ್ಚಿಸಲು ಉಭಯ ಸದನಗಳ ವಿಶೇಷ ಅಧಿವೇಶನ ಕರೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

BRAHMOS: ಬ್ರಹ್ಮೋಸ್ ಕ್ಷಿಪಣಿ ತಾಕತ್ತು ಏನೆಂದು ಪಾಕಿಸ್ತಾನದ ಬಳಿ ಕೇಳಿ: ಯೋಗಿ ಆದಿತ್ಯನಾಥ್