ನವದೆಹಲಿ : ಮಾನನಷ್ಟ ಪ್ರಕರಣದಲ್ಲಿ ಜೈಲು ಶಿಕ್ಷೆ ವಿಧಿಸಿರುವ ಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಸೋಮವಾರ ಸೂರತ್ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕಾನೂನು ತಂಡವು 2 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್ ಆದೇಶಕ್ಕೆ ತಡೆ ನೀಡುವಂತೆ ಕೋರಿ ಸೂರತ್ನ ಸೆಷನ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಆಧಾರಿಸಿ ವರದಿಯಾಗಿದೆ.
ರಾಹುಲ್ ಗಾಂಧಿ ಹಿರಿಯ ನಾಯಕರಾದ ಕೆ.ಸಿ ವೇಣುಗೋಪಾಲ್ ಅವರೊಂದಿಗೆ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ರಾಜ್ಯಸಭಾ ಸದಸ್ಯ ಮತ್ತು ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ಅಭಿಷೇಕ್ ಸಿಂಘ್ವಿ ಮೇಲ್ಮನವಿ ಸಲ್ಲಿಸುವ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಿ ಹಲವು ಸಲಹೆ ನೀಡಿದ್ದಾರೆ.